ಉಡುಪಿ | ಯುವತಿಯ ಮೇಲೆ ಅತ್ಯಾಚಾರ ಪ್ರಕರಣ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಬಂಧನ !

Date:

ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಪ್ರದೀಪ್ ಪೂಜಾರಿ (26) ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಯುವತಿಯೊಬ್ಬಳನ್ನು ನಿರ್ಜನ ಪ್ರದೇಶದಲ್ಲಿ ಬೆದರಿಸಿ ಅತ್ಯಾಚಾರ ಎಸಗಿದ ಬಗ್ಗೆ ವರದಿಯಾಗಿದೆ. ಮೊದಲೇ ಕಿರುಕುಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯು ಮತ್ತೆ ಕುಕೃತ್ಯಕ್ಕೆ ಮುಂದಾಗಿದ್ದಾನೆ.

- Advertisement -

ನ.29ರಂದು ಈ ಘಟನೆ ನಡೆದಿದ್ದು ನಂತರದಲ್ಲಿ ಯುವತಿ ಮನೆಯವರಿಗೆ ಮಾಹಿತಿ ನೀಡಿದ್ದಳು. ಕುಟುಂಬದವರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸಂಘಪರಿವಾರದ ಕಾರ್ಯಕರ್ತರಿಂದ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ — CPI(M)
ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಉಭಯ ಜಿಲ್ಲೆಗಳ ಸಂಘ ಪರಿವಾರದ ಕಾರ್ಯಕರ್ತರು ನಿರಂತರವಾಗಿ ಜಿಲ್ಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಮಾಡುತ್ತಿದ್ದ ಸುದ್ಧಿಗಳು ಜಿಲ್ಲೆಯ ಜನತೆಯನ್ನು ಆತಂಕಕ್ಕೆ ಒಳಗಾಗಿಸಿದೆ ಇದನ್ನು ಎಲ್ಲಾ ಪ್ರಜ್ಞಾವಂತರು ವಿರೋಧಿಸಬೇಕು. ಸಂಘಪರಿವಾರದ ಕಾರ್ಯಕರ್ತರಿಗೆ ಮನುಸ್ಮೃತಿಯ ವಿಚಾರಧಾರೆಯ ಪಾಠ ಹೇಳಿಕೊಡುತ್ತಿರುವುದರಿಂದಲೇ ಹೆಣ್ಣು ಮಕ್ಕಳನ್ನು ತುಚ್ಚವಾಗಿ ಎರಡನೇ ದರ್ಜೆಯ ಪ್ರಜೆಯಾಗಿ ನೋಡುತ್ತಿರುವ ಪರಿಣಾಮವೇ ಈ ಕೃತ್ಯಕ್ಕೆ ಕಾರಣ. ಸಂಘಪರಿವಾರದ ಸಂಘಟನೆಗಳಿಂದ ಹೆಣ್ಣು ಮಕ್ಕಳು ಹಾಗೂ ಯುವಜನರು ಅಂತರ ಕಾಪಾಡಿಕೊಳ್ಳಬೇಕು ಹಾಗೂ ಮಹಿಳಾ ವಿರೋಧಿಯಾದ ಈ ಸಂಘಟನೆಗಳನ್ನು ವಿರೋಧಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ನೀಡಲೇಬೇಕು ಎಂದು ಆಗ್ರಹಿಸಿದರು.

ಅಪರಾಧಿಯ ಧರ್ಮ ನೋಡಿ ಮೌನವಾಗಬೇಡಿ – WIM
ಈ ಬಗ್ಗೆ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಉಡುಪಿ ಜಿಲ್ಲಾ ಅಧ್ಯಕ್ಷೆ ನಾಝಿಯಾ ನಸ್ರುಲ್ಲಾ ಪ್ರತಿಕ್ರಿಯಿಸಿದ್ದು, ಇತ್ತೀಚೆಗೆ ಅವಳಿ ಜಿಲ್ಲೆಗಳಲ್ಲಿ ಸ್ವಯಂ ಧರ್ಮ ರಕ್ಷಕರೆಂದು ಕರೆಸಿಕೊಳ್ಳುವವರಿಂದ ಇಂತಹ ಪ್ರಕರಣಗಳು ಜಾಸ್ತಿಯಾಗಿ ನಡೆಯುತ್ತಿದ್ದು, ಕಳೆದ ತಿಂಗಳು ಮದುವೆಯಾಗುವುದಾಗಿ ನಂಬಿಸಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಮಣಿಪಾಲದ ಲಾಡ್ಜ್ ಗೆ ಕರೆದು ಸಿಕ್ಕಿಬಿದ್ದ ಘಟನೆಯು ನಡೆದಿತ್ತು. ಪೆರ್ಡೂರಿನಲ್ಲಿ ನಡೆದ ಘಟನೆಯಲ್ಲಿ ಒಂದು ವೇಳೆ ಆರೋಪಿಯು ಅನ್ಯ ಕೋವಿನವನಾಗಿದ್ದರೆ ಇಲ್ಲಿಯ ಶಾಸಕರ ಹಾಗೂ ಹಿಂದೂ ಧರ್ಮದ ರಕ್ಷಕರೆಣಿಸಿಕೊಂಡವರ ಆಕ್ರೋಶ, ಪ್ರತಿಭಟನೆ ಮುಗಿಲು ಮುಟ್ಟುತ್ತಿತ್ತು. ಆದರೆ ಆರೋಪಿಯು ತಮ್ಮದೇ ಸಂಘಟನೆಯವನಾಗಿರುವುದರಿಂದ ಸಂತ್ರಸ್ತೆಯ ನೋವು ಇವರಿಗೆ ಕಾಣಿಸುತ್ತಿಲ್ಲ. ಇಂತಹ ಅಪರಾಧ ಪ್ರಕರಣಗಳಳ್ಳೂ ಕೃತ್ಯ ಎಸಗಿದವನು ತಮ್ಮ ಧರ್ಮದವನು ಎಂದು ತಿಳಿದು ಸುಮ್ಮನಿರುವ ಪ್ರವೃತ್ತಿ ನಿಜಕ್ಕೂ ಕಳವಳಕಾರಿ. ಇದು ಅಪರಾಧಿಗಳಿಗೆ ಕುಮ್ಮಕ್ಕು ನೀಡುತ್ತದೆ. ಆದ್ದರಿಂದ ನಾಗರಿಕ ಸಮಾಜ ಇವರ ನಕಲಿ ಧರ್ಮ ಪ್ರೇಮವನ್ನು ಅರ್ಥಮಾಡಿಕೊಳ್ಳಬೇಕು, ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ಒಟ್ಟಾಗಿ ಹೋರಾಟವನ್ನು ನಡೆಸುವ ಮೂಲಕ ಇಂತಹ ಪ್ರಕರಣಗಳು ಮರುಕಳಿಸಿದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...