ಉಡುಪಿ | ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಹಗರಣ, 21 ನೇ ದಿನಕ್ಕೆ ಮುಂದುವರೆದ ರೈತರ ಪ್ರತಿಭಟನೆ

Date:

Advertisements

ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರದ ಬಗ್ಗೆ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಇವರ ನೇತೃತ್ವದಲ್ಲಿ ಕಳೆದ ಇಪ್ಪತ್ತೊಂದು ದಿನಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಉಡುಪಿ ಜಿಲ್ಲೆಯ ಸಂಸದರಾಗಲಿ ಅಥವಾ ಜಿಲ್ಲೆಯ ಶಾಸಕರುಗಳಾಗಲಿ ಇಲ್ಲಿಯವರೆಗೆ ಭೇಟಿ ನೀಡಲಿಲ್ಲ ಇದಕ್ಕೆ ಕಾರಣ ಏನು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿಯ ಸಂಸದರು ಹಾಗೂ ಬಿಜೆಪಿಯ ಶಾಸಕರುಗಳು ರೈತ ವಿರೋಧಿಗಳೇ ? ಅಥವಾ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ನಿಮ್ಮ ಸಮ್ಮತಿ ಇದೆಯಾ? ಎಂಬುದನ್ನು ಜಿಲ್ಲೆಯ ಎಲ್ಲಾ ಜನಸಾಮಾನ್ಯರಿಗೆ ಹಾಗೂ ರೈತರಿಗೆ ನೀವು ತಿಳಿಸಬೇಕು ಎಂದು ಹೇಳಿದ್ದಾರೆ.

1004703233

ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಕೋಳಿ ಅಂಕದ ಬಗ್ಗೆ ಮಾತ್ರ ಮಾತನಾಡಿದ ಉಡುಪಿ ಜಿಲ್ಲೆಯ ಬಿಜೆಪಿಯ ಶಾಸಕರುಗಳು ರೈತರು ನಡೆಸುತ್ತಿರುವ ಅಹೋರಾತ್ರಿಧರಣಿಯ ಬಗ್ಗೆ ಚಕಾರ ಎತ್ತದಿರುವುದು ಜಿಲ್ಲೆಯ ರೈತ ಬಾಂಧವರು ಹಾಗೂ ಜನಸಾಮಾನ್ಯರು ಸಂಶಯ ಪಡುವಂತಾಗಿದೆ ಎಂದು ಹೇಳಿದ್ದಾರೆ.

Advertisements

ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಈ ಅವ್ಯವಹಾರ ಆಗ ನಮ್ಮ ಜಿಲ್ಲೆಯ ಈಗಿನ ಸಂಸದರು ಹಾಗೂ ಉಡುಪಿ ಜಿಲ್ಲೆಯ ಓರ್ವ ಶಾಸಕರು ರಾಜ್ಯದ ಸಚಿವರುಗಳಾಗಿದ್ದರು ಅವರು ಈ ಬಗ್ಗೆ ಚಕಾರ ಎತ್ತದಿರುವುದು ನೋಡಿದರೆ ಈ ಅವ್ಯವಹಾರ ಮಾಡಿದವರ ಬೆಂಬಲಕ್ಕೆ ನಿಂತಿದ್ದಾರೆಯೇ ಎಂಬುದನ್ನು ಉಡುಪಿ ಜಿಲ್ಲೆಯ ಜನರಿಗೆ ತಿಳಿಸಿ ಸಂಶಯ ದೂರ ಮಾಡಲಿ ಎಂದಿದ್ದಾರೆ.

1004703240
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X