ಉಡುಪಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯಿಲ್ಲದೆ ಲಾಡ್ಜಿಂಗ್‌ಗೆ ಪರವಾನಗಿ: ಬಿಜೆಪಿ ನಾಯಕರೇ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ : ಸುರೇಶ್ ಶೆಟ್ಟಿ ಬನ್ನಂಜೆ

Date:

ವಿಧಾನಸಭೆಯಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರು, ಮೊದಲು ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ತಮ್ಮದೇ ಪಕ್ಷದ ಆಡಳಿತದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ.

- Advertisement -

ಉಡುಪಿ ನಗರಸಭೆ ವ್ಯಾಪ್ತಿಯ ಬನ್ನಂಜೆ ಹಾಗೂ ಶಿರಿಬೀಡು ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯಿಲ್ಲದೆ ಐದು ಅಂತಸ್ತಿನ ಲಾಡ್ಜಿಂಗ್, ಪಾರ್ಟಿ ಹಾಲ್ ಹಾಗೂ ಹೋಟೆಲ್-ರೆಸ್ಟೋರೆಂಟ್ ಕಟ್ಟಡಕ್ಕೆ ಪರವಾನಗಿ ನೀಡಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ನಗರದಲ್ಲಿ ಈಗಾಗಲೇ ಪಾರ್ಕಿಂಗ್ ಸಮಸ್ಯೆ ತೀವ್ರವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಇಂತಹ ಕಟ್ಟಡಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಖಚಿತಪಡಿಸದೆ ಅನುಮತಿ ನೀಡುವುದರಿಂದ ಸಾರ್ವಜನಿಕರಿಗೆ ಮತ್ತಷ್ಟು ತೊಂದರೆಯಾಗಲಿದೆ. ಈ ವಿಚಾರವನ್ನು ತಾವು ನಗರಸಭಾ ಅಧಿವೇಶನದಲ್ಲೇ ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದ್ದಾಗಿ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

ಈ ಕುರಿತು ಲಿಖಿತ ಹೇಳಿಕೆ ನೀಡುವಂತೆ ಅಂದಿನ ನಗರಸಭಾ ಅಧ್ಯಕ್ಷರು ಸೂಚಿಸಿದ್ದರು. ಅದರಂತೆ ತಾವು ಲಿಖಿತವಾಗಿ ಮನವಿ ಸಲ್ಲಿಸಿ, ಅದರ ಪ್ರತಿಯನ್ನೂ ಪಡೆದುಕೊಂಡಿದ್ದರೂ, ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಇದೀಗ ಅದೇ ಸ್ಥಳದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಉದ್ಘಾಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯಲ್ಲಿ ಬಿಜೆಪಿ ಆಡಳಿತದಲ್ಲಿತ್ತು. ಈ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಅಥವಾ ಅವೈಜ್ಞಾನಿಕ ಕಟ್ಟಡಗಳಿಗೆ ಪರವಾನಗಿ ನೀಡಲು ಕಾರಣವೇನು ಎಂಬುದನ್ನು ಉಡುಪಿಯ ಸಂಸದರು, ಸ್ಥಳೀಯ ಶಾಸಕರು, ನಗರಸಭೆಯ ಬಿಜೆಪಿ ಅಧ್ಯಕ್ಷರು ಹಾಗೂ ಸದಸ್ಯರು ಜನರಿಗೆ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುವ ಮೊದಲು, ತಮ್ಮದೇ ಪಕ್ಷದ ಆಡಳಿತದಲ್ಲಿ ಉಡುಪಿಯಲ್ಲಿ ನಡೆದಿರುವ ಇಂತಹ ಬೆಳವಣಿಗೆಗಳ ಬಗ್ಗೆ ಬಿಜೆಪಿ ರಾಜ್ಯ ನಾಯಕರು ಗಮನಹರಿಸಬೇಕು. ಉಡುಪಿ ನಗರಸಭೆಯಲ್ಲಿನ ಪಾರ್ಕಿಂಗ್ ಸಮಸ್ಯೆ ಹಾಗೂ ಕಟ್ಟಡ ಪರವಾನಗಿ ವಿಚಾರದಲ್ಲಿ ಬಿಜೆಪಿಯ ಸ್ಥಳೀಯ ಆಡಳಿತದ ವೈಫಲ್ಯವನ್ನು ಮೊದಲು ಪರಿಶೀಲಿಸಲಿ. ಬಳಿಕ ಸಚಿವರ ರಾಜೀನಾಮೆ ಕುರಿತು ಪ್ರತಿಭಟನೆ ನಡೆಸಲಿ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...