ಉಡುಪಿ | ನಾಳೆ ಫೆ.10 ; ಆರೋಗ್ಯ ಹಕ್ಕು ಕಾಯ್ದೆ ಜಾರಿಗಾಗಿ ಮಣಿಪಾಲದಲ್ಲಿ ಪ್ರತಿಭಟನೆ

Date:

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಯತ್ನವನ್ನು ವಿರೋಧಿಸಿ, ಕೊರಗರು ಸೇರಿದಂತೆ ಬಡವರಿಗೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ–ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೊಳ್ಳಬೇಕು ಎಂದು ಒತ್ತಾಯಿಸಿ ಫೆಬ್ರವರಿ 10ರಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳದ ಅಧ್ಯಕ್ಷೆ ಸುಶೀಲಾ ನಾಡ ತಿಳಿಸಿದ್ದಾರೆ.

- Advertisement -

ಉಡುಪಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.2ರಿಂದ 17ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆರೋಗ್ಯ ಹಕ್ಕಿನ ಜಾಥಾ ನಡೆಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಫೆ.10ರಂದು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಟೈಗರ್ ಸರ್ಕಲ್‌ನಿಂದ ಮೆರವಣಿಗೆಯಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಲಿದ್ದು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಆರೋಗ್ಯ ಹಕ್ಕಿನ ಜಾಥಾದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದೊಂದಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ, ಜಿಲ್ಲಾ ಮಲೆಕುಡಿಯ ಸಂಘ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕರ್ನಾಟಕ ಪ್ರದೇಶ ಭಾರತೀಯ ಕಿಸಾನ್ ಸಂಘ ಉಡುಪಿ ಜಿಲ್ಲೆ, ಆಸರೆ ಸಂಸ್ಥೆ, ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಡ್ರಗ್ ಆಕ್ಷನ್ ಫೋರಂ ಕರ್ನಾಟಕ ಸೇರಿದಂತೆ ಹಲವು ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಹೇಳಿದರು.

2024ರ ಡಿಸೆಂಬರ್‌ನಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಳಪೆ ಔಷಧಗಳಿಂದ ತಾಯಂದಿರ ಮರಣ ಸಂಭವಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಹಕ್ಕಿನ ಜಾಥಾ ಆರಂಭಿಸಲಾಗಿತ್ತು. ಆದರೆ ಸರಕಾರದಿಂದ ಸ್ಪಂದನೆ ದೊರಕದ ಕಾರಣ ಈ ವರ್ಷ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸುಶೀಲಾ ನಾಡ ಹೇಳಿದರು. ತಮಿಳುನಾಡು, ಕೇರಳ ಹಾಗೂ ರಾಜಸ್ತಾನಗಳ ಮಾದರಿಯಲ್ಲಿ ಕರ್ನಾಟಕದ ಸರಕಾರಿ ಆಸ್ಪತ್ರೆಗಳಲ್ಲೂ ಎಲ್ಲರಿಗೂ ಉಚಿತ ಹಾಗೂ ಉತ್ತಮ ಗುಣಮಟ್ಟದ ಔಷಧಗಳು ಸಿಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಇತ್ತೀಚೆಗೆ ಸರಕಾರಿ ಆಸ್ಪತ್ರೆಗಳ ಖಾಸಗೀಕರಣದ ಸುದ್ದಿ ಹೆಚ್ಚಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಗಳ ಕೊರತೆಯಿಂದ ಜನರನ್ನು ಖಾಸಗಿಯಾಗಿ ಔಷಧ ಖರೀದಿಸಲು ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಪುತ್ರನ್, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಸುಂದರ್ ಮಾಸ್ತರ್, ಶ್ಯಾಮರಾಜ್ ಬಿರ್ತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಇಕ್ಷಾಲ್ ಮನ್ನಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...