- ಜಾನುವಾರು ವ್ಯಾಪಾರಿ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆ
- ರಾಮನಗರದ ಸಾತನೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು
ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರನ್ನು, ಈದಿನ.ಕಾಮ್ ಮಧ್ಯಾಹ್ನ ಸಂಪರ್ಕಿಸಿದ್ದ ವೇಳೆ “ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈವರೆಗೂ ಯಾರನ್ನು ಬಂಧಿಸಿಲ್ಲ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದರು. ಈಗ ಮತ್ತೆ ಅವರನ್ನು ಸಂಪರ್ಕಿಸಿದಾಗ, ಕರೆಗೆ ಅವರು ಲಭ್ಯರಾಗುತ್ತಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ರಾಮನಗರ ಜಿಲ್ಲೆ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಭಾನುವಾರ ಮಧ್ಯಾಹ್ನ ಕನಕಪುರ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿ ಎದುರು ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಂಬಂಧಿಕರು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣ ಸಂಬಂಧ ದಲಿತ ಮುಖಂಡ ನೀಲಿ ರಮೇಶ್, ಈದಿನ.ಕಾಮ್ ಜೊತೆಗೆ ಮಾತನಾಡಿ, “ಇದ್ರೀಸ್ ಪಾಷಾ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕೃತ್ಯದ ಹಿಂದಿರುವ ವ್ಯಕ್ತಿಗಳು ಯಾರೆಂದು ಬಹಿರಂಗಪಡಿಸಬೇಕು ಎಂದು ಪೊಲೀಸರಲ್ಲಿ ಒತ್ತಾಯಿಸಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್
ಘಟನೆ ಹಿನ್ನೆಲೆ