ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ; ರಾಜ್ಯಮಟ್ಟದಲ್ಲಿ ದಾವಣಗೆರೆ 6ನೇ ಸ್ಥಾನ

Date:

Advertisements

‘ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ 2023ರ ವರದಿ ಪ್ರಕಟಗೊಂಡಿದ್ದು, ದಾವಣಗೆರೆ ನಗರವು 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳ ವಿಭಾಗದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.

ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

“ದೇಶದ ನಗರಗಳಲ್ಲಿ ಯಾವುದು ಹೆಚ್ಚು ಸ್ವಚ್ಛ ಎಂಬುದನ್ನು ಈ ವರದಿಯು ನಿರ್ಧರಿಸಿದ್ದು, ಕಳೆದ ಬಾರಿ ರಾಜ್ಯ ಮಟ್ಟದಲ್ಲಿ 12ನೇ ಸ್ಥಾನ ಪಡೆದಿದ್ದ ದಾವಣಗೆರೆಯು ಈ ಬಾರಿ 6ನೇ ಶ್ರೇಯಾಂಕ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ” ಎಂದು ಹೇಳಿದರು.

Advertisements

“ರಾಷ್ಟ್ರೀಯ ಮಟ್ಟದಲ್ಲಿ ನಗರವು ಕಳೆದ ಬಾರಿ 220ನೇ ಶ್ರೇಯಾಂಕ ಪಡೆದಿತ್ತು. ಈ ಬಾರಿ 169ನೇ ಶ್ರೇಯಾಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದೆ. ಶಾಸಕರು, ಮೇಯರ್, ಜಿಲ್ಲಾಧಿಕಾರಿ, ಪಾಲಿಕೆಯ ವಿವಿಧ ಸಮಿತಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನಗರವು ಉತ್ತಮ ಶ್ರೇಯಾಂಕ ಪಡೆಯಲು ಸಹಕಾರಿಯಾಗಿದೆ. ಇದೇ ಮೊದಲ ಬಾರಿಗೆ ದಾವಣಗೆರೆ ನಗರಕ್ಕೆ ‘ಸ್ಟಾರ್ ರೇಟಿಂಗ್’ ಕೂಡ ದೊರೆತಿದೆ” ಎಂದು ಮಾಹಿತಿ ಹಂಚಿಕೊಂಡರು.

“ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪೌರಕಾರ್ಮಿಕರಿಗೆ ನೀಡಬೇಕು. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ₹500 ರಿಂದ ₹10,000 ದಂಡ ವಿಧಿಸಲು ಅವಕಾಶ ಇದೆ. ರಸ್ತೆಗಳು, ವೃತ್ತಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರಿಗೆ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ” ಎಂದು ತಿಳಿಸಿದರು.

“ನಗರದಲ್ಲಿ ನಿತ್ಯ 170 ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಪಾಲಿಕೆಯಲ್ಲಿ ಕಸ ಸಂಗ್ರಹಿಸುವ 93 ಆಟೊಗಳಿವೆ. ನಗರದ ಜನಸಂಖ್ಯೆಗೆ ಅನುಗುಣವಾಗಿ 150 ಆಟೊಗಳ ಅಗತ್ಯವಿದೆ. ಹಂತ ಹಂತವಾಗಿ ಆಟೊಗಳನ್ನು ಖರೀದಿಸಲಾಗುವುದು. ನಗರದಲ್ಲಿ 1.61 ಲಕ್ಷ ಆಸ್ತಿ ಆನ್‌ಲೈನ್ ಆಗಿದೆ. ನಮೂನೆ 2ನ್ನು ಆನ್‌ಲೈನ್‌ನಲ್ಲೇ ಪಡೆಯಬಹುದಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಿಯಾಂಕ ಗಾಂಧಿ ಹೇಳಿದಂತೆ ಆರನೇ ಗ್ಯಾರಂಟಿ ಜಾರಿಗೆ ತರಬೇಕು; ಬಿಸಿಯೂಟ ತಯಾರಕರ ಆಗ್ರಹ

“ದಾವಣಗೆರೆ ನಗರದಲ್ಲಿ 45,000 ಖಾಲಿ ನಿವೇಶನಗಳಿವೆ. ಖಾಲಿ ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡುವುದು ಮಾಲೀಕರ ಜವಾಬ್ದಾರಿಯಾಗಿದೆ. ವರ್ಷಕ್ಕೊಮ್ಮೆ ಕಡ್ಡಾಯವಾಗಿ ಖಾಲಿ ನಿವೇಶನಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಬೇಕು. ಸ್ವಚ್ಛತೆ ಕಾಪಾಡದ ನಿವೇಶನಗಳ ಮಾಲೀಕರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದರು.

ಸಬೆಯಲ್ಲಿ ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯರುಗಳಾದ ಅಬ್ದುಲ್ ಲತೀಫ್, ಗಡಿಗುಡಾಳ್ ಮಂಜುನಾಥ್, ಎ ನಾಗರಾಜ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X