ಕುಶಾಲನಗರ | ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿ: ಟಿ ಜಿ ಪ್ರೇಮ್ ಕುಮಾರ್

Date:

ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಎನ್ಎಸ್ಎಸ್ ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಹಾಗೂ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ವತಿಯಿಂದ ‘ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ-2026’ನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ‘ಸ್ವಾಮಿ ವಿವೇಕಾನಂದರ ಬದುಕು ಮತ್ತು ದೂರದೃಷ್ಠಿ, ವ್ಯಕ್ತಿತ್ವ’ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ‘ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿ’ ಎಂದರು.

- Advertisement -

ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಉದಾತ್ತ ವ್ಯಕ್ತಿತ್ವ, ಜೀವನ ಕ್ರಮ, ದೂರದೃಷ್ಠಿ ಹಾಗೂ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು, ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರದ ಸಮಗ್ರತೆ ಹಾಗೂ ಏಕತೆಯನ್ನು ಎತ್ತಿ ಹಿಡಿಯಬೇಕು. ವಿವೇಕಾನಂದರ ಜೀವನ, ಚರಿತ್ರೆ, ಬದುಕು ಹಾಗೂ ಸಾಧನೆಯು ಜಾಗತಿಕ ಮಟ್ಟದಲ್ಲಿ ಭಾರತೀಯ ಸಂಸ್ಕೃತಿಯನ್ನು ಮೆರೆದಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ. ಗೀತಾ ಮಾತನಾಡಿ, ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿದ ಕರೆ ‘ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವಕಾಲಕ್ಕೂ ನೆನೆಯುವ, ಯುವಕರನ್ನು ಉತ್ತಮ ಕೆಲಸಗಳಿಗೆ ತೊಡಗಿಸಲು, ಬಡಿದೆಚ್ಚರಿಸುವ ವಾಕ್ಯವಾಗಿದೆ. ಹೀಗೆ, ಅವರ ಇಂತಹ ಹಲವು ಕೊಡುಗೆಗಳು ಸ್ಮರಣಾರ್ಥ. ಕೊಡುಗೆ, ಸೇವೆಗಳ ನೆನಪಿಗಾಗಿ, ಯುವ ಜನಾಂಗ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಣೆ ಮಾಡಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿದ್ಯಾರ್ಥಿಗಳು ಪೋಷಕರ ಬೆಂಬಲ ಮನಗಾಣಿ: ಆಯುಕ್ತ ಶೇಕ್ ತನ್ವಿರ್ ಆಸೀಫ್

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಕಛೇರಿ ಸಿಬ್ಬಂದಿ ಎಂ. ಉಷಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...