ಮಂಗಳೂರು | ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು : ಟಿ.ಎಂ ಶಾಹೀದ್

Date:

ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.

- Advertisement -

ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಸರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಚೇತನರಿಗೆ ವಿವಿಧ ಉದ್ಯೋಗದಾತರ ಪ್ರಾಯೋಜಿತ ಯಾಂತ್ರಿಕ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವಿಕಲಚೇತನರು ಸಮಾಜದಲ್ಲಿ ಯಾವುದೇ ಕೊರತೆಯಾಗದಂತೆ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ವಿಕಲಚೇತನರ ಸೌಲಭ್ಯಗಳನ್ನು ವಿಳಂಬವಿಲ್ಲದೆ ನೀಡಬೇಕು.

ಇತರರಂತೆ ಅವರು ದುಡಿಯಲು ಹಾಗೂ ಸೇವೆಗೈಯಲು ಈ ಸೌಲಭ್ಯಗಳು ಪೂರಕವಾಗಬೇಕು ಎಂದು ಅವರು ಹೇಳಿದರು. ಕಾರ್ಮಿಕರ ಜೀವನ ಉನ್ನತವಾಗಿರಲು ಅವರಿಗೆ ಕನಿಷ್ಠ ವೇತನ ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದರು.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಮುಕ್ತವಾಗಿ ಸಂಚರಿಸಲು ಅವರಿಗೆ ತ್ರಿಚಕ್ರ ವಾಹನ ನೀಡುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ಕೈಜೋಡಿಸಿದ ವಿವಿಧ ಉದ್ಯಮ, ಕೈಗಾರಿಕೆಗಳನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಹೊರಗುತ್ತಿಗೆಯಲ್ಲಿರುವ ಮಹಿಳಾ ನೌಕರರಿಗೆ ಹೊರಗುತ್ತಿಗೆ ಸಂಸ್ಥೆಗಳು ಮಾತೃತ್ವ ರಜೆ ಹಾಗೂ ಋತುಮತಿ ರಜೆಯನ್ನು ನೀಡಲು ನಿರಾಕರಿಸುತ್ತಿರುವ ಪ್ರಕರಣಗಳು ಕಂಡುಬಂದಿದ್ದು, ಅಂತಹ ಏಜೆನ್ಸಿಗಳ ವಿರುದ್ಧ ಕಾರ್ಮಿಕ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಪ್ಯಾನಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸದಾಶಿವ ಉಳ್ಳಾಲ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಿಕೋಟಿ, ಎಂ.ಆರ್.ಪಿ.ಎಲ್ ಆಡಳಿತ ಸಿಜಿಎಂ ಪ್ರಶಾಂತ್ ಬಾಳಿಗ ಮತ್ತಿತರರು ಉಪಸ್ಥಿತರಿದ್ದರು. ಕಾರ್ಮಿಕ ಅಧಿಕಾರಿ ಕುಮಾರ್ ಸ್ವಾಗತಿಸಿದರು. ವಿಲ್ಮಾ ಎಲಿಜಬೆತ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...