ಟಿ ನರಸೀಪುರ | ಭೀಕರ ಅಪಘಾತ, 10 ಮಂದಿ ಸಾವು; ‌ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Date:

Advertisements

ಬಳ್ಳಾರಿಯಿಂದ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ಒಂದೇ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, “ಕೂಡಲೇ ಘಟನಾ ಸ್ಥಳಕ್ಕೆ ಹೋಗಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದ್ದು, ಸಚಿವ ಎಚ್‌ ಸಿ ಮಹದೇವಪ್ಪ ಅವರಿಗೂ ಸ್ಥಳ ಪರಿಶೀಲಿಸುವಂತೆ ತಿಳಿಸಲಾಗಿದೆ” ಎಂದು ಹೇಳಿದರು.

ಮೈಸೂರು ಜಿಲ್ಲೆಯ ಟಿ.ನರಸೀಪುರ-ಕೊಳ್ಳೆಗಾಲ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 4 ಗಂಡಸರು, 3 ಮಹಿಳೆಯರು 3 ಮಕ್ಕಳು ಸೇರಿದಂತೆ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಇತರೆ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಬಸ್‌ನಲ್ಲಿದ್ದ 16 ಜನರಿಗೆ ಗಾಯ

ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ 16 ಮಂದಿ ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು, ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಮೃತರ ವಿವರ

ಅಪಘಾತದಲ್ಲಿ ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಮಂಜುನಾಥ (25), ಪೂರ್ಣಿಮಾ (30), ಕಾರ್ತಿಕ (8), ಪವನ್(7), ಪುನೀತ್(4)‌, ಗಾಯತ್ರಿ (28), ಶ್ರವ್ಯ (5), ಕೊಟ್ರೇಶ್(45), ಸುಜಾತ(40), ಸಂದೀಪ್ (23) ಮೃತಪಟ್ಟಿದ್ದು, ಶಶಿಕುಮಾರ್ (30), ಜನಾರ್ಧನ (32) ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

10 ಲಕ್ಷ ರೂಪಾಯಿ ಪರಿಹಾರಕ್ಕೆ ಒತ್ತಾಯ

ಟಿ ನರಸೀಪುರದ ಕುರುಬೂರು ಬಳಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕುರುಬೂರು ಶಾಂತಕುಮಾರ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಪಕ್ಕದಲ್ಲಿ ಬೆಳೆದು ನಿಂತ ಗಿಡಗಂಟಿಗಳ ಕಾರಣ ಎದುರು ಬದುರು ವಾಹನಗಳಿಗೆ ರಸ್ತೆ ಕಾಣುವುದಿಲ್ಲ. ಜೊತೆಗೆ ರಸ್ತೆ ಕಿರಿದಾಗಿದ್ದು, ಅತಿವೇಗದ ಕಾರಣದಿಂದಲೇ ಇಂತಹ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಇದರ ಹೊಣೆ ಹೊರಬೇಕಾಗುತ್ತದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X