ಚಿತ್ತಾಪುರದಲ್ಲಿ ಆರ್‌ಎಸ್ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಸೀಲ್ದಾರ್‌ ಆದೇಶ

Date:

ಚಿತ್ತಾಪುರ ಪಟ್ಟಣದಲ್ಲಿ ಅ.19ರಂದು ರಾಷ್ಟೀಯ ಸ್ವಯಂ ಸೇವಕ ಸಂಘ (ಆರ್‌ಎಸ್ಎಸ್‌) ದಿಂದ ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 6.30 ರವರೆಗೆ ಆಯೋಜನೆ ಮಾಡಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿ ಶನಿವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

- Advertisement -

ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್‌ಎಸ್ಎಸ್‌ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಪತ್ರ ಬರೆದಿರುವ ತಹಶೀಲ್ದಾರ್ ಅವರು, ಪಥ ಸಂಚಲನ ನಡೆಸುವ ಭಾನುವಾರ ದಿವಸವೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಹೀಗಾಗಿ ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೋರಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವ ಇದೆ. ಅನುಮತಿ ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.

ಪಥಸಂಚಲನ ನಡೆಸುವ ಉದ್ದೇಶದಿಂದ ಅದ್ದೂರಿ ಸಿದ್ಧತೆ ಮಾಡಿಕೊಂಡಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದಲ್ಲಿ ಭಗವಾಧ್ವಜ, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಿದ್ದರು. ಅಳವಡಿಕೆಗೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳ ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಇದೀವ ತಹಶೀಲ್ದಾರ್ ಅವರು ಇಡೀ ಪಂಥ ಸಂಚಲನ ಕಾರ್ಯಕಮಕ್ಕೆ ಅನುಮತಿ ನಿರಾಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...