ವಿದ್ಯಾರ್ಥಿ ನಿಲಯಗಳ ಬೆಡ್ ಶೀಟ್ ಕಾಳಸಂತೆಯಲ್ಲಿ ಮಾರಾಟ ಮಾಡಿರುವರ ಮೇಲೆ ಕ್ರಮ ಕೈಗೊಳ್ಳಿ

Date:

ಬಂಗಾರಪೇಟೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದು ಬಂಗಾರಪೇಟೆ-ಕೆಜಿಎಫ್ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸುಮಾರು 17 ವಿದ್ಯಾರ್ಥಿ ನಿಲಯಗಳಿದ್ದು, ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉಜ್ವಲಗೊಳಿಸಲು ಉನ್ನತ ವಿದ್ಯಾವಂತರಾಗಿ ತಮ್ಮ ಜೀವನಗಳನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿನಿಲಯಗಳಲ್ಲಿ ದಾಖಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ವಾರ್ಡ್ ನ್-ಅಡುಗೆ ಸಹಾಯಕರು ಮಕ್ಕಳಿಗೆ ಸರ್ಕಾರದಿಂದ ಬರುವ ಮೂಲಭೂತ ಸೌಕರ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಮಕ್ಕಳ ಹಕ್ಕನ್ನು ಕಸಿಯುತ್ತಿದ್ದಾರೆ ಎಂದು ಅಂಬೇಡ್ಕರ್ ವೀರಸೇನೆ ಅಧ್ಯಕ್ಷ ಭಟ್ರಕುಪ್ಪ ಅರುಣ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಕುಮಾರಿ ಅವರಿಗೆ ಮನವಿ ನೀಡಿ ಬಟ್ರಕುಪ್ಪ ಅರುಣ್ ಒತ್ತಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಅಂಬೇಡ್ಕರ್ ಬಾಲಕಿಯರ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಲಯದ ವಾರ್ಡ್ನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಲೀಲ ಎಂಬುವವರು ಅಲ್ಲಿನ ಮಕ್ಕಳ ಬೆಡ್‌ಗಳು ಹಾಗೂ ಪ್ಯಾನ್ ಇತ್ಯಾಧಿ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವಿಡೀಯೋಗಳು ಅಲೆದಾಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಆದರೆ ಶಿವಲೀಲ ಅವರು ಮಹೇಶ್ ಅಡುಗೆಯವರಿಗೆ ಇಲ್ಲಿನ ವಸ್ತುಗಳನ್ನು ನೀಡಿದ್ದೇನೆ ಎಂದು ತಿಳಿಸಿದ್ದು ಸಹಾಯಕ ನಿರ್ದೇಶಕರಿಗೆ ಯಾವುದೇ ರೀತಿ ಪತ್ರ ವ್ಯವಹಾರ ಹಾಗೂ ಅನುಮತಿ ಪಡೆಯದೆ ಇಲ್ಲಿನ ವಸ್ತುಗಳನ್ನು ಮಾರಾಟ ಮಾಡಿರುವುದು ಸರ್ಕಾರದ ಕೆಲಸವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ. ಮಹೇಶ್ ಅವರು ಶಿವಲೀಲ ಅವರಿಗೆ ನೀಡಿರುವ ಪತ್ರದಲ್ಲಿ ನಾನು ಪ್ರಭಾರ ವಾರ್ಡನ್ ಎಂದು ಸಹಿ ಮಾಡಿ ಇಲ್ಲಿನ ವಸ್ತುಗಳನ್ನು ಎತ್ತುವಳಿ ಮಾಡಿಕೊಂಡು ಹೋಗಿರುತ್ತಾರೆ.

ಮಹೇಶ್ ಅವರಿಗೆ ವಾರ್ಡನ್ ಆಗಿ ಮುಂಬಡ್ತಿ ನೀಡಿ ಆದೇಶ ಮಾಡಿರುವುದು ಯಾರು? ಆದರೆ ಇಷ್ಟೆಲ್ಲಾ ನಡೆದ ತಕ್ಷಣ ಶಿವಲೀಲ ಅವರನ್ನು ಕೂಡಲೇ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂಬುದು ಪ್ರಶ್ನೆಯಾಗಿದೆ.

ಇದರ ಬಗ್ಗೆ ಸವಿಸ್ತಾರವಾಗಿ ತನಿಖೆ ಮಾಡಿ ಶಿವಲೀಲ ವಾರ್ಡ್ನ್ ಹಾಗೂ ಮಹೇಶ್ ಅಡುಗೆಯವರನ್ನು ಈ ಕೂಡಲೇ ಅಮಾನತ್ತು ಮಾಡಿ ಸರ್ಕಾರದ ಕೆಲಸ ದುರುಪಯೋಗಪಡಿಸಿಕೊಂಡಿರುವುದರ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ನೀಡಿ ಇವರನ್ನು ಕೆಲಸದಿಂದ ವಜಾ ಮಾಡಬೇಕೆಂದು ಸಂಘಟನೆಯು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ..? ಒಳ ಮೀಸಲಾತಿ:ಬೆಂಗಳೂರಿನ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ ಮಾದಿಗ ಮುಖಂಡರುಗಳು

10 ದಿನಗಳೊಳಗೆ ತಾವು ಕ್ರಮ ಕೈಗೊಳ್ಳದೆ ಇಲ್ಲವಾದಲ್ಲಿ ಇಲಾಖೆ ಮುಂಭಾಗ ಅನಿಧಿಷ್ಠಾವಧಿ ಧರಣಿಯನ್ನು ಹಮ್ಮಿಕೊಳ್ಳಲಾಗುವುದೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಂಬರೀಶ್, ಸುಮಂತ್, ರವಿಕುಮಾರ್, ಹಾಗೂ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...