ಚಾಮರಾಜನಗರ | ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ: ಶ್ರೀರೂಪ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಸಂಬಂಧ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಜಿಲ್ಲೆಯ ಇಟ್ಟಿಗೆ ಕಾರ್ಖಾನೆ, ಅಂಗಡಿ, ಉದ್ಯಮ, ಗ್ಯಾರೇಜ್, ಎಸ್ಟೇಟ್, ಇನ್ನಿತರ ಕಡೆ ಅನಿರೀಕ್ಷಿತ ಭೇಟಿ ನೀಡಿ ಬಾಲಕಾರ್ಮಿಕರು ದುಡಿಮೆ ಮಾಡುತ್ತಿರುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟ ಮಾಲೀಕರ ವಿರುದ್ದ ಕ್ರಮ ಜರುಗಿಸುವಂತೆ
ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಾಲಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟಲಿವೆ. ದುಡಿಮೆಯಲ್ಲಿ ತೊಡಗಿರುವ ಶಿಕ್ಷಣ ವಂಚಿತ ಮಕ್ಕಳನ್ನು ಮುಖ್ಯವಾಹಿನಿಗೆ ಕರತರಬೇಕಿದೆ. ಜಿಲ್ಲೆಯ ಯಾವುದೇ ಉದ್ಯಮ, ಕೆಲಸ ಮಾಡುವ ಸ್ಥಳಗಳಲ್ಲಿ ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧವಾಗಲಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ವಿಶೇಷವಾಗಿ ಕೈಗಾರಿಕಾ ಪ್ರದೇಶಗಳು, ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಕುಟುಂಬ, ಹಾಡಿ ವ್ಯಾಪ್ತಿಯಲ್ಲಿರುವ ಎಸ್ಟೇಟ್, ಇನ್ನಿತರ ಕಡೆ ಭೇಟಿ ನೀಡಬೇಕು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆಯೇ ಎಂಬುದನ್ನು ಖುದ್ದು ಪರಿಶೀಲಿಸಬೇಕು. ಅಪಾಯಕಾರಿ ಉದ್ಯಮಗಳಲ್ಲಿ ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುವಂತಿಲ್ಲ. ಇಂತಹಕಡೆ ನಿಗದಿತ ಅವಧಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವುದು ಕಂಡುಬಂದಲ್ಲಿ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ತೊಡಗಿದ್ದರೆ ಮತ್ತು 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವುದು ಕಂಡುಬಂದಲ್ಲಿ ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ದಿ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ರೇಷ್ಮೆ, ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ ಸಾರ್ವಜನಿಕರು ದೂರು ನೀಡಬಹುದು. ಅಲ್ಲದೇ, ಈ ಇಲಾಖೆಗಳ ಅಧಿಕಾರಿಗಳು ಉದ್ಯಮಗಳಿಗೆ ಭೇಟಿ ನೀಡಿ ಬಾಲಕಾರ್ಮಿಕರನ್ನು ದುಡಿಸಿಕೊಳುತ್ತಿದ್ದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲು ಮಾಡಿಕೊಳ್ಳಬೇಕು ಎಂದರು.

ಶಾಲೆ ತೊರೆದ ಮಕ್ಕಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. 5 ಹಾಗೂ 7ನೇ ತರಗತಿ ಬಳಿಕ ಮಕ್ಕಳು ಶಾಲೆಗೆ ದಾಖಲಾಗುತ್ತುದ್ದಾರೆಯೇ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಒಂದು ವೇಳೆ ಶಾಲೆಗೆ ದಾಖಲಾಗದಿದ್ದರೆ ಅಥವಾ ನಿರಂತರವಾಗಿ ಗೈರು ಹಾಜರಾಗುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಪೋಷಕರ ಮನೆಗೆ ತೆರಳಿ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಲು ಪ್ರೇರೇಪಿಸಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಮಾತನಾಡಿ, ಅಪಾಯಕಾರಿಯಲ್ಲದ ಉದ್ಯಮಗಳಲ್ಲಿ ಕಿಶೋರರನ್ನು ನೇಮಿಸಿಕೊಂಡಾಗ ಪಾಲಿಸಬೇಕಾದ ಷರತ್ತು ಹಾಗೂ ನಿಬಂಧನೆಗಳನ್ನು ಕೆಲಸದ ಸ್ಥಳಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು. ವಿಶ್ರಾಂತಿ ಹಾಗೂ ಕೆಲಸದ ಅವಧಿಯನ್ನು ನಿಯಮಾನುಸಾರ ಗೊತ್ತು ಮಾಡಬೇಕು. ಯಾವುದೇ ಉಲ್ಲಂಘನೆಯಾದರೆ ದೂರು ದಾಖಲಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್ ಮಾತನಾಡಿ, ಬಾಲಕಾರ್ಮಿಕ ಪದ್ದತಿ ನಿಷೇಧಕ್ಕೆ ಸಂಬಂಧಿಸಿದಂತೆ ಅನುಸರಿಸಲಾಗುವ ಎಲ್ಲ ಪ್ರಕ್ರಿಯೆಗಳಲ್ಲಿ ಪೊಲೀಸ್ ಇಲಾಖೆ ನೆರವು ನೀಡಲಿದೆ. ಎಲ್ಲಿಯೇ ಆಗಲಿ ಬಾಲಕಾರ್ಮಿಕರು ದುಡಿಯುತ್ತಿರುವ ಮಾಹಿತಿ ನೀಡಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಬಾಲಕಾರ್ಮಿಕ ಪದ್ದತಿ, ಬಾಲ್ಯವಿವಾಹ ನಿಷೇಧ ಕುರಿತ ಮಾಹಿತಿ ನೀಡುವ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ?ಮೈಸೂರು | ನೀರು-ಒಳಚರಂಡಿ ಕರ ಹೆಚ್ಚಳ ರದ್ದುಪಡಿಸುವಂತೆ ಪ್ರತಿಭಟನೆ ನಡೆಸಿದ ಎಸ್‌ಯುಸಿಐ(ಸಿ)

ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ. ರಾಮಚಂದ್ರಯ್ಯ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಎಂ. ಮಹೇಶ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರುಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...