ಕೊಡಗು | ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

” ಕೊಡಗು ಜಿಲ್ಲೆಯಾದ್ಯಂತ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ, ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಪ್ರಾಣ ಹಾನಿ, ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು.

ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಎನ್‍ಡಿಆರ್‍ಎಫ್ ತಂಡದ ಜೊತೆ ಸಮನ್ವಯ ಸಾಧಿಸಬೇಕು ” ಎಂದು ತಿಳಿಸಿದರು.

Advertisements

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಔಷಧಿಗಳನ್ನು ದಾಸ್ತಾನು ಮಾಡಿಕೊಂಡು ಮುಂಗಾರು ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಗಳು ತಮ್ಮ ತಮ್ಮ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸಬೇಕು. ಇದಲ್ಲದೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ನಗರ, ಸ್ಥಳೀಯ, ಗ್ರಾಮೀಣ ಸಂಸ್ಥೆಗಳ ಬಲವರ್ಧನೆಗೆ ಮುಂದಾಗಿ : ಡಾ. ಸಿ. ನಾರಾಯಣ ಸ್ವಾಮಿ

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X