ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆ

Date:

  • ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ಸಭೆ
  • ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ಸಿಇಓಗಳಿಗೆ ನಿರ್ದೇಶನ ನೀಡಿದ ಸಚಿವರು

ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಇದಕ್ಕಾಗಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ಸಚಿವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ, ಚರ್ಚೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಕ್ಷಣವೇ ತಾಲೂಕು ಪ್ರವಾಸ ಕೈಗೊಳ್ಳಬೇಕೆಂದು ತಿಳಿಸಿದರು.

ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದೆ. ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಂದ ನೀರಿನ ತೀವ್ರ ಕೊರತೆಯಿದೆ ಎಂಬ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಸಚಿವರ ಗಮನಕ್ಕೆ ತಂದರು.

Meeting photo

ಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು.

ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ತಾಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಬೇಕು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಹಣಕಾಸು ತೊಂದರೆ ಎದುರಾದಲ್ಲಿ ಅವಶ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಸಚಿವರು ಸೂಚಿಸಿದರು.

ರಾಜ್ಯದ 31 ಜಿಲ್ಲೆಗಳಲ್ಲಿ, 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ, ಇದರೊಂದಿಗೆ 431 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು, 357 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳು, ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ, ಮುಖ್ಯ ಅಭಿಯಂತರ ಎಜಾಝ್ ಹುಸೇನ್‌ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...