ಚಾಮರಾಜನಗರ | ಅಂಗನವಾಡಿಗಳಲ್ಲಿ ಗುಣಮಟ್ಟದ ಆಹಾರ, ಮೂಲ ಸೌಕರ್ಯಕ್ಕೆ ಕ್ರಮ ವಹಿಸಿ : ಸಂಸದ ಸುನೀಲ್ ಬೋಸ್

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್ ‘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಮೂಲ ಸೌಕರ್ಯದ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ನೀಡುವ ಆಹಾರ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

” ಜಿಲ್ಲೆಯಲ್ಲಿ ಸಾಕಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲದೇ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಇದಕ್ಕಾಗಿ, ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಯಾ ತಾಲೂಕು ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಅಂಗನವಾಡಿ ಕಟ್ಟಡಗಳಿಗೆ ಜಾಗ ಗುರುತಿಸಿ ಮಂಜೂರು ಮಾಡಿಸಿಕೊಳ್ಳಬೇಕು. ಅಂಗನವಾಡಿಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡುವ ಕಾರ್ಯ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ” ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪರಿಶಿಷ್ಟ ವರ್ಗಗಳ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಹಾಡಿಗಳಲ್ಲಿ ವಿತರಿಸುವ ಪೌಷ್ಠಿಕ ಆಹಾರ (ನ್ಯೂಟ್ರಿಷಿಯನ್ ಫುಡ್) ಕಳಪೆಯಾಗಿರುವ ಬಗ್ಗೆ ದೂರುಗಳಿವೆ. ಮುಂದಿನ ದಿನಗಳಲ್ಲಿ ಹಾಡಿ ಜನರಿಗೆ ಸರಬರಾಜಾಗುವ ಆಹಾರ ಗುಣಮಟ್ಟದಿಂದ ಕೂಡಿರುವ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸಿ ಕ್ರಮ ವಹಿಸಬೇಕು. ಕೇಂದ್ರ ಪುರಸ್ಕೃತ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

ಇ-ಸ್ವತ್ತು ನೀಡುವ ಸಂಬಂಧ ಜನಸಾಮಾನ್ಯರನ್ನು ಕಚೇರಿಗೆ ಅಲೆದಾಡಿಸಬಾರದು. ನಿಗದಿತ ಕಾಲಮಿತಿಯಲ್ಲಿ ಇ-ಸ್ವತ್ತು ನೀಡಲು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಖಾತೆ ಮಾಡಿಕೊಡಬೇಕು. ಕಂದಾಯ ಇಲಾಖೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಬೇಕು. ಆಸ್ತಿ ಹಾಗೂ ಜಮೀನಿನ ಸರ್ವೇ ಕಾರ್ಯ ಹಾಗೂ ಒತ್ತುವರಿ ತೆರವುಗೊಳಿಸುವಿಕೆ ಚುರುಕುಗೊಳಿಸಬೇಕು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಮಹದೇಶ್ವರ ಬೆಟ್ಟ ಹಾಗೂ ಗೋಪಿನಾಥಂ ಗ್ರಾಮಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಕಾಮಗಾರಿ ಸಮಯದಲ್ಲಿ ಸಾಕಷ್ಟು ರಸ್ತೆಗಳನ್ನು ಅಗೆದು ಮುಚ್ಚದೇ ಬಿಟ್ಟಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ದಾಖಲಾಗುತ್ತಿವೆ. ಅರಣ್ಯ ಇಲಾಖೆ ಕಾಮಗಾರಿ ಅನುಷ್ಠಾನಕ್ಕೆ ಸಹಕಾರ ನೀಡಬೇಕು. ಪುಣಜನೂರು ಸೇರಿದಂತೆ 21 ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಯ ಪೈಪ್ ಲೈನ್ ಅಳವಡಿಕೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಯಾವುದೇ ತೊಂದರೆ ನೀಡಬಾರದು. ಕಾಮಗಾರಿಯನ್ನು ವೇಗಗೊಳಿಸಿ ಜನರಿಗೂ ಅನೂಕೂಲ ಮಾಡಿಕೊಡಬೇಕು ಎಂದರು.

ಇತ್ತೀಚೆಗೆ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಮಕ್ಕಳು ವರ್ಗಾವಣೆ ಪತ್ರ ಪಡೆದಿರುವ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು ಮಕ್ಕಳು ಮತ್ತೆ ಶಾಲೆಗೆ ಹಾಜರಾಗಿರುವ ಬಗ್ಗೆ ಹಾಗೂ ಅಡುಗೆ ಕೆಲಸದ ಮಹಿಳೆಯನ್ನು ಅಲ್ಲಿಯೇ ಮುಂದುವರಿಸಿರುವ ಹಾಗೂ ಹೊಸ ಶಿಕ್ಷಕರನ್ನು ನೇಮಕ ಮಾಡಿರುವ ಕುರಿತು ಪರಿಶೀಲನೆ ನಡೆಸಿದರು. ಯಾವುದೇ ಗೊಂದಲಗಳನ್ನು ಪರಿಹರಿಸಿ ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳು ಶಿಕ್ಷಕರಿಗೆ ತಿಳಿಹೇಳಬೇಕು ಎಂದು ಹೇಳಿದರು.

ಜಿಲ್ಲೆಯ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯ ಅರಣ್ಯದಲ್ಲಿ ಹುಲಿಗಳು ಸಾವಿಗೀಡಾದ ಕುರಿತು ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಅವಘಡಗಳಿಗೆ ಅವಕಾಶವಾಗದಂತೆ ತೀವ್ರ್ರ ಕಟ್ಟೆಚ್ಚರ ವಹಿಸಬೇಕು. ಜಿಲ್ಲೆಯ ಅರಣ್ಯ, ವನ್ಯಜೀವಿ ಸಂಪತ್ತನ್ನು ಸಂರಕ್ಷಣೆಯತ್ತ ಗಮನ ಹರಿಸುವಂತೆ ತಾಕೀತು ಮಾಡಿದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ. ಕಾಮಗಾರಿಗಳನ್ನು ಅದಷ್ಟು ಬೇಗನೇ ಪೂರ್ಣಗೊಳಿಸಬೇಕು. ಯಾವುದೇ ಅನುದಾನ ವಾಪಸ್ಸು ಸರ್ಕಾರಕ್ಕೆ ಹೋಗದಂತೆ ಎಚ್ಚರ ವಹಿಸಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ ಚಾಮರಾಜನಗರ ಪಟ್ಟಣದಲ್ಲಿ ಹೊಸ ಬಡಾವಣೆಗಳ ರಚನೆಯಾಗಿವೆ. ಆದರೆ, ಮೂಲ ಸೌಕರ್ಯಗಳಿಲ್ಲದೆ ಜನರು ತೊಂದರೆಗೊಳಗಾಗಿದ್ದಾರೆ. ಹೊಸ ಬಡಾವಣೆಗಳಿಗೆ ಸಮರ್ಪಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿವೆ. ಇದನ್ನು ಕೂಡಲೇ ಅಧಿಕಾರಿಗಳು ಪರಿಹರಿಸಬೇಕು ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಕುಡಿಯುವ ನೀರು, ರಸ್ತೆ ನಿರ್ಮಾಣ, ಬೀದಿ ದೀಪ ಅಳವಡಿಕೆ ಸೇರಿದಂತೆ ನಗರೋತ್ಥಾನ ಕಾಮಗಾರಿ ಅನುಷ್ಟಾನದಲ್ಲಿ ಸಮಸ್ಯೆಗಳಿದ್ದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಕಾಮಗಾರಿಗಳ ವಹಿಸಿಕೊಂಡಿರುವ ಗುತ್ತಿಗೆದಾರರು ನಿಯಮಿಯ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಿತ್ತೂರು ರಾಣಿ ಚನ್ನಮ್ಮ ಶಾಲೆಗೆ ದಿಡೀರ್ ಭೇಟಿ ನೀಡಿದ ಸಚಿವ ಮಹದೇವಪ್ಪ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್. ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...