ಚಿಕ್ಕಬಳ್ಳಾಪುರ | ಯಶ್ವಂತ್‌ ಅಕಾಡೆಮಿಯ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಸುಗ್ಗಿ ಯಶಸ್ವಿ

Date:

ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶಾಲಾ ಬ್ಯಾಗ್ ವಿತರಣೆ ಹಾಗೂ ಸಾಂಸ್ಕೃತಿಕ ಸುಗ್ಗಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

- Advertisement -

ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಸಂಸ್ಥೆಯ ಸಾಮಾಜಿಕ ಸೇವೆಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಯಶ್ವಂತ್‌ ಅಕಾಡೆಮಿ ಅಧ್ಯಕ್ಷ ಮಂಚನಬೆಲೆ ಶ್ರೀನಿವಾಸ್‌ ಮಾತನಾಡಿ, ಕಳೆದ 16 ವರ್ಷಗಳಿಂದ ಸಮಾಜದ ಬಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಬ್ಯಾಗ್‌ ವಿತರಣೆ ಸೇರಿದಂತೆ ಇತ್ಯಾದಿ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಸಂಸ್ಥೆ ನಡೆಸಿಕೊಂಡು ಬರುತ್ತಿದೆ. ಪ್ರತಿಭಾನ್ವಿತ ಬಡ ಮಕ್ಕಳಿಗಾಗಿ ಸಾಂಸ್ಕೃತಿಕ ವೇದಿಕೆಯನ್ನು ಸೃಷ್ಟಿಸಿ, ಮಕ್ಕಳಲ್ಲಿನ ಕಲೆಯನ್ನು ಹೊರ ತೆಗೆಯುವಲ್ಲಿ ಸಂಸ್ಥೆ ಮುಂದೆಜ್ಜೆಯಿಡುತ್ತಿದೆ. ಬಡ ಕಲಾವಿದರಿಗೆ ವೇದಿಕೆ ಒದಗಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು.

ವಕೀಲ ಸಂಘದ ಜಂಟಿ ಕಾರ್ಯದರ್ಶಿ ಅಭಿಲಾಶ್ ಕೆ.ವಿ ಮಾತನಾಡಿ, ಕಲೆ ಯಾರಪ್ಪನ ಸ್ವತ್ತಲ್ಲ. ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊದಲನೆಯ ಸ್ಥಾನದಲ್ಲಿ ಇರುವಂತಹ ಯಶವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ಕಾರ್ಯ ಶ್ಲಾಘನೀಯ. ಜಾತ್ಯಾತೀತವಾಗಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಕಲಾ ವೇದಿಕೆ ರೂಪಿಸಿಕೊಡುತ್ತಿರುವ ಸಂಸ್ಥೆಯ ಕಾರ್ಯ ಅಭಿನಂದನಾರ್ಹ ಎಂದು ಹೊಗಳಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ರಾಜಕಾಂತ್‌ ಮಾತನಾಡಿ, ಸಮಾಜ ಸೇವೆಯ ಮೂಲಕ ಮಾನವೀಯತೆಯನ್ನು ಮೆರೆಯುತ್ತಿರುವ ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಆಶಿಸಿದರು.

ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಮಣಪ್ಪ ಮಾತನಾಡಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಸಮಾರಂಭದಲ್ಲಿ ಹೈಕೋರ್ಟ್‌ ವಕೀಲ ಪಾವಗಡ ಶ್ರೀರಾಮ್‌, ಗುಡಿಬಂಡೆ ಕಸಾಪ ಅಧ್ಯಕ್ಷ ಪ್ರೆಸ್‌ ಸುಬ್ಬರಾಯಪ್ಪ, ಎಂ.ಪಿ.ಉಪೇಂದ್ರ, ಮಂಚಲಬೆಲೆ ಗ್ರಾಪಂ ಸದಸ್ಯ ಮಧು, ಅಹಿಂದ ಜನಪದ ವೇದಿಕೆ ಜಿಲ್ಲಾಧ್ಯಕ್ಷ ಕೃಷ್ಣಾಚಾರಿ, ವರುಣ ಸೇವಾ ಟ್ರಸ್ಟ್‌ ಅಧ್ಯಕ್ಷ ಉಮೇಶ್‌ ಜಿ, ನಗರ ಠಾಣೆ ಆರಕ್ಷಕ ಉಪನಿರೀಕ್ಷಕ ನಂಜುಂಡಯ್ಯ ಹೆಚ್‌ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಕಲಾಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...