ಕರ್ನಾಟಕದಲ್ಲಿ ತಾಲಿಬಾನೀಕರಣ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

Date:

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದ್ದು, ಕಾಂಗ್ರೆಸ್‌ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ ಕಾಂಗ್ರೆಸ್‌ ಕಾರ್ಯಕರ್ತರು ಪಾಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸುತ್ತಿದ್ದರು. ಈ ವೇಳೆ, ತಮ್ಮ ಮನೆಯ ಮುಂದೆ ಪಟಾಕಿ ಸಿಡಿಸುವುದನ್ನು ಕೃಷ್ಣಪ್ಪ ಎಂಬಾತ ವಿರೋಧಿಸಿದ್ದರು. ಅವರ ಮೇಲೆ ಹಲವರು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಕೃಷ್ಣಪ್ಪ ಸಾವನ್ನಪ್ಪಿದ್ದರು.

ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಕಟೀಲ್, “ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರು ಹೆಚ್ಚುತ್ತಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಇಂತಹ ಜನರಿಗೆ ಆಶ್ರಯ ನೀಡಿ ಪ್ರಚಾರ ಮಾಡಿದ್ದರಿಂದ ಇದು ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಒಳ್ಳೆಯದ್ದನ್ನು ನಿರೀಕ್ಷಿಸಲು ಸಾಧ್ಯವಿಲ್ಲ,” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿದ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...