ತಾಳಿಕೋಟೆ | ಭಾರೀ ಮಳೆ: ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತ

Date:

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತವಾಗಿದ್ದು, ಇದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.

- Advertisement -

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಿಂದ ಬಸವನ ಬಾಗೇವಾಡಿ-ವಿಜಯಪುರ ಮಾರ್ಗದ ಹೆದ್ದಾರಿಯಲ್ಲಿರುವ ಸೇತುವೆ ಮೇಲೂ ದೋಣಿ ನದಿಯ ನೀರು ಹರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೊಕಿಹಾಳ, ಮೀಣಜಗಿ, ಮಾರ್ಗದಲ್ಲಿ 15 ಕಿಮಿ ಸುತ್ತ ಹಾಕಿಕೊಂಡು ವಿಜಯಪುರದತ್ತ ವಾಹನಗಳು ಸಂಚರಿಸಿದವು. ಇದರಿಂದಾಗಿ ಪಟ್ಟಣದ ಹಡಗಿನಾಳ ರಸ್ತೆಯಲ್ಲಿ ವಾಹನಗಳ ದಟ್ಟಣೆ ತುಂಬಿತ್ತು. ಕಳೆದ ಮೂರು ವರ್ಷದಿಂದ ಸಾರ್ವಜನಿಕರು, ವಾಹನಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ.

“ಶಾಸಕ ಸಿ ಎಸ್ ನಾಡಗೌಡ ಅವರು ನೂತನ ಸೇತುವೆ ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದರಿಂದ ಹಳೆಯ ಸೇತುವೆಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಆದರೆ ಅದರ ಮರುನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದ್ದು, ಜಮೀನುಗಳು ಜಲಾವೃತವಾಗಿವೆ” ಎಂದು ಸ್ಥಳೀಯರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಸೆ. 15ರಿಂದ ಬಗರ್ ಹುಕುಂ ಸಾಗುವಳಿದಾರರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಪಿಎಸ್‌ಐಆರ್‌ಎಸ್ ಭಂಗಿ ಮಾತನಾಡಿ, “ದೋಣಿ ನದಿಯ ಜಲ ನಯನದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಡಾ. ವಿನಯ ಹೂಗಾರ ಅವರ ಆದೇಶದಂತೆ ನದಿ ಬಳಿ ಪೊಲೀಸ್ ಕಾವಲನ್ನು ಇರಿಸಲಾಗಿತ್ತು. ಸೇತುವೆ ಜಲಾವೃತವಾಗುತ್ತಿದ್ದಂತೆಯೇ ಸಂಚಾರ ಸ್ಥಗಿತಗೊಳಿಸಿ, ಬ್ಯಾರಿಕೇಡ್‌ ಹಾಕಿ ಅಪಾಯಕ್ಕೆ ಅವಕಾಶ ಕೊಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...