ತಾಳಿಕೋಟೆ | ರವಿಚಂದ್ರ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

Date:

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಬಳಿ ಯುವಕ ರವಿಚಂದ್ರ ದೇವಪ್ಪ ಮಾದರ ಅವರ ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಾಳಿಕೋಟೆ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

- Advertisement -

ವಿಜಯಪುರ ಜಿಲ್ಲೆಯ ತಾಳಿಕೋಟೆ ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಕತ್ರಿ ಬಜಾರ್ ಹಾಗೂ ಶಿವಾಜಿ ವೃತ್ತ ಮಾರ್ಗವಾಗಿ ಬಸ್ ನಿಲ್ದಾಣ ಎದುರಿನ ಕನ್ನಡ ಶಾಲೆ ರಸ್ತೆ ಮೂಲಕ ತಹಶೀಲ್ದಾರ್‌ ಕಚೇರಿಗೆ ತಲುಪಿತು. ಮೆರವಣಿಗೆಯ ವೇಳೆ ಬಸವೇಶ್ವರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ವಕೀಲ ಕೆ.ಬಿ ದೊಡಮನಿ, “ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬಸವರಾಜ ಸಿದ್ದಾಪುರ ಮಾತನಾಡಿ, “ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ” ಎಂದು ಆರೋಪಿಸಿದರು.

ಡಿ.ಎಸ್.ಎಸ್. (ಅಂಬೇಡ್ಕರ್ ಧ್ವನಿ) ಚಂದ್ರಕಾಂತ್ ಎಸ್. ಕಾದ್ರೊಳ್ಳಿ ಬಣದ ಜಿಲ್ಲಾಧ್ಯಕ್ಷ ಬಾಲಚಂದ್ರ ಹುಲ್ಲೂರು ಮಾತನಾಡಿ, “ಸಮಾಜದಲ್ಲಿ ನ್ಯಾಯ ವ್ಯವಸ್ಥೆ ದುರ್ಬಲ ವರ್ಗಗಳಿಗೆ ದೊರೆಯದಂತಾಗಿದ್ದು, ಪ್ರಭಾವಿ ವ್ಯಕ್ತಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ದೂರಿದರು.

ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಕಟ್ಟಿಮನಿ ಮಾತನಾಡಿ, “ಕೆಲ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯ ತೋರಿದ್ದು, ಕಾನೂನು ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಅನ್ವಯಿಸುವಂತಾಗಿದೆ” ಎಂದು ಟೀಕಿಸಿದರು.

ಡಿ.ಎಸ್.ಎಸ್ (ಅಂಬೇಡ್ಕರ್ ಧ್ವನಿ) ತಾಲ್ಲೂಕು ಅಧ್ಯಕ್ಷ ರಮೇಶ ಯ. ದೊಡಮನಿ ಸಾಸನೂರ ಮಾತನಾಡಿ, “ಅಧಿಕಾರಿಗಳು ಪ್ರಭಾವಿ ವ್ಯಕ್ತಿಗಳ ಕೈಗೊಂಬೆಯಾಗದೆ ಬಡವರ ಪರವಾಗಿ ಕಾರ್ಯನಿರ್ವಹಿಸಿದರೆ ಜನರು ಅವರನ್ನು ದೇವರಂತೆ ಗೌರವಿಸುತ್ತಾರೆ” ಎಂದು ಹೇಳಿದರು.

ಕಾರ್ಯಕ್ರಮವನ್ನು ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ನಿರೂಪಿಸಿದರು. ತಾಲ್ಲೂಕು ಕಾರ್ಯದರ್ಶಿ ಮಾದೇವ ಚಟ್ನಳ್ಳಿ ಮನವಿಪತ್ರವನ್ನು ವಾಚಿಸಿದರು. ಶಂಕ್ರಪ್ಪ ದೊಡಮನಿ ವಂದಿಸಿದರು. ಪ್ರತಿಭಟನೆ ಬಳಿಕ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶೇಖಪ್ಪ ಚಬನೂರ, ರಾಮಪ್ಪ ಕಟ್ಟಿಮನಿ, ಸುಭಾಷ್ ಗುಂಡಕನಾಳ, ಮಾದೇವ ನಾಗೂರ, ಯಮನಪ್ಪ ಕಟ್ಟಿಮನಿ, ಹುಲಗಪ್ಪ ಕಟ್ಟಿಮನಿ, ಮರಿಯಪ್ಪ ಚಲವಾದಿ, ದ್ಯಾಮಣ್ಣ ಸೋಮನಾಳ, ಬಸವರಾಜ ಸಾಸನೂರ, ಯಮನಪ್ಪ ಕೆಸರಹಟ್ಟಿ, ಶೇಖಪ್ಪ ಕಾರಗನೂರ, ಶಿವಪ್ಪ ಕಾರಗನೂರ, ಯಮನಪ್ಪ ಶಿವಪುರ, ಕಿಟ್ಟಪ್ಪ ತುಂಬಿಗಿ, ಪರಶುರಾಮ ಕೂಚಬಾಳ, ಮಾರುತಿ ಸಿದ್ದಾಪುರ, ಶೇಖು ಆಲೂರು, ಪರಶುರಾಮ ತಳವಾರ, ಶಿವು ವನಹಳ್ಳಿ, ಮಲಕಪ್ಪ ವಂದಗಾನೂರ, ಕಾಶಿನಾಥ ಮಾದರ, ಮುತ್ತು ಅಮರಗೋಳ, ಶರಣಪ್ಪ ಹರನಾಳ, ಹನುಮಂತ ಚಲವಾದಿ, ಪರಶುರಾಮ ನಾಲತವಾಡ, ನಾಗರಾಜ ಗಜಕೋಶ, ಮೈಬೂಬ ಅವಟಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...