ತಾಳಿಕೋಟೆ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಆರೋಪಿ ವಕೀಲನ ಗಡಿಪಾರಿಗೆ ಆಗ್ರಹ

Date:

ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರಿಗೆ ನ್ಯಾಯಾಲಯದ ಕಲಾಪದಲ್ಲಿ ವಕೀಲ ರಾಕೇಶ ಕಿಶೋರ್ ಶೂ ಎಸೆದು ಅವಮಾನಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿ ವಕೀಲನನ್ನು ಗಡಿಪಾರು ಮಾಡುವಂತೆ ಅಂಬೇಡ್ಕರ್‌ ಸೇನೆ ತಾಳಿಕೋಟೆ ತಾಲೂಕು ಸಮಿತಿ ಆಗ್ರಹಿಸಿದೆ. ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ್ ಡಾ. ವಿನಿಯಾ ಹೂಗಾರ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

- Advertisement -

ಸಮಿತಿಯ ವಿಜಯಪುರ ಜಿಲ್ಲಾಧ್ಯಕ್ಷ ಬಸು ಮಾದರ ಮಾತನಾಡಿ, “ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶ ಗವಾಯಿ ಅವರ ಮೇಲೆ ಶೂ ಎಸೆದಿರುವುದು ಅಕ್ಷಮ್ಯ ಅಪರಾಧ. ಈ ಘಟನೆಯನ್ನು ಸಂಘಟನೆಯು ಉಗ್ರವಾಗಿ ಖಂಡಿಸುತ್ತದೆ. ಇದು ದೇಶದ ನ್ಯಾಯಾಂಗ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ತೋರಿದ ಅಗೌರವವಾಗಿದ್ದು, ಇಡೀ ದೇಶ ತಲೆತಗ್ಗಿಸುವಂಥಹ ಘಟನೆಯಾಗಿದೆ. ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರನ್ನು ಈ ರೀತಿ ಅವಮಾನಿಸಲಾಗಿದೆ. ಈ ಹೇಯ ಕೃತ್ಯ ಎಸಗಿದ ವಕೀಲ ಕಿಶೋರ್ ರಾಕೇಶನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಇದಕ್ಕಿಂತಲೂ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ”‌ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

ಈ ವೇಳೆ ಅಂಬೇಡ್ಕರ್ ಸೇನೆ(ರಿ) ತಾಲೂಕ ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಎ ಪಿ ಜೆ ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷ ಶಪೀಕ ಇನಾಮದಾರ, ಜಾಂಭವ ಯುವ ಸೇನೆ ಪ್ರಧಾನ ಕಾರ್ಯದರ್ಶಿ ಕಾಶಿನಾಥ ಮಾದರ, ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಜುಮಣ್ಣ ನಾಲತವಾಡ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸಿಫ್ ಕೆಂಬಾವಿ, ಅಂಬೇಡ್ಕರ್ ಸೇನೆ ನಗರ ಘಟಕ ಅಧ್ಯಕ್ಷ ನಾಗರಾಜ ಗಜಕೋಶ, ತಾಲೂಕ ಕಾರ್ಯದರ್ಶಿ ಮಹದೇವ ಚಟ್ನಳ್ಳಿ (ಅಸ್ತಿ), ತಾಲೂಕ ಖಜಾಂಚಿ ಪರಶುರಾಮ ತಳವಾರ, ಕಾರ್ಮಿಕ ಘಟಕ ಅಧ್ಯಕ್ಷ ಪರಶುರಾಮ ನಾಲತವಾಡ, ಶಿವಪುರ ಗ್ರಾಮ ಘಟಕ ಅಧ್ಯಕ್ಷ ಯಮನಪ್ಪ ನಾಯ್ಯೋಡಿ, ಪದಾಧಿಕಾರಿಗಳಾದ ರಮೇಶ್ ಹರನಾಳ, ದ್ಯಾಮಣ್ಣ ಸೋಮನಾಳ, ಮಲ್ಲಿಕಾರ್ಜುನ ಚಳ್ಳಗಿ, ಬಾಗಪ್ಪ ಕಟ್ಟಿಮನಿ, ಗಣಪತಿ ಗುತ್ಯಾಳ, ತಾಯಪ್ಪ ಕೂಚಬಾಳ, ರಮೇಶ ಚಬನೂರ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...