ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿ ವರ್ಷವೂ ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗನೂರು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಡಿವಾಳಮ್ಮ ನಾಡಗೌಡ ಅವರನ್ನು ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರು ಸನ್ಮಾನಿಸಿದರು.
ತಮ್ಮ ಶಾಲೆಯ ಮಕ್ಕಳು ರಾಜ್ಯಮಟ್ಟದವರೆಗೂ ಪ್ರತಿನಿಧಿಸುವಂತಹ ಛಲವನ್ನು ತುಂಬಿ ಶಾಲೆಯ ಕೀರ್ತಿಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ ಶಿಕ್ಷಕಿ ಮಡಿವಾಳಮ್ಮ ಅವರ ಸೇವಾ ವೃತ್ತಿಯನ್ನು ಪರಿಗಣಿಸಿ ಸೆಪ್ಟಂಬರ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಶಿಕ್ಷಕಿಯ ಪ್ರಶಸ್ತಿಯನ್ನು ಪುರಸ್ಕರಿಸಿದ್ದರು.

ಮಡಿವಾಳಮ್ಮ ನಾಡಗೌಡ ಅವರು ಕಳೆದ ಹತ್ತು ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಶೈಕ್ಷಣಿಕ ರಂಗದ ಬುನಾದಿಯಾಗುವುದರ ಜತೆಗೆ ಮಕ್ಕಳಿಗೆ ಕಲಿಕಾ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ವಿವಿಧ ಕಲಾ ಸ್ಪರ್ಧೆಗಳು ಹಾಗೂ ಜತೆಗೆ ಶೈಕ್ಷಣಿಕವಾಗಿ ರಾಜ್ಯಮಟ್ಟದವರೆಗೂ ಮಕ್ಕಳನ್ನು ಪ್ರತಿನಿಧಿಸುತ್ತಾರೆ.
ಈ ಸುದ್ದಿ ಓದಿದ್ದೀರಾ? ತಾಳಿಕೋಟೆ | ಭಾರೀ ಮಳೆ: ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತ
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಮ್ ಪೀರ್ ವಾಲೆಕಾರ, ಅಂಬೇಡ್ಕರ್ ಸೇನೆ ತಾಳಿಕೋಟೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟೀಮನಿ, ದಲಿತ ವಿದ್ಯಾರ್ಥಿ ಪರಿಷತ್ತಿನ ಗುರುಪ್ರಸಾದ್ ಬಿ ಜೆ ಸೇರಿದಂತೆ ಶಿಕ್ಷಕರಾದ ರಾಹುಲ ರಜಪೂತ, ಮಾಳಿಂಗರಾಯ ಮೇಗಲಮನಿ ಇದ್ದರು.