ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಪುರುಷರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಸಂಯೋಜಕ ಲಕ್ಷ್ಮಣ್ ಮಚಕುರೆ ತಿಳಿಸಿದ್ದಾರೆ.
ಭಾರತ ಸರ್ಕಾರದ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಯುವಕರ ಸಂಘ, ದಿಲೀಪ್ ಕುಮಾರ್ ಭಯ್ಯ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಜನವರಿ 28ರಂದು ಚಿಟಗುಪ್ಪ ತಾಲೂಕು ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಟಗುಪ್ಪ ಪಟ್ಟಣದ ಪಂಚಾಕ್ಷರಿ ಪ್ರೌಢ ಶಾಲೆ ಆವರಣದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, 15 ವರ್ಷದಿಂದ 29 ವಯಸ್ಸಿನ ಆಸಕ್ತ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದೆ.
ಪುರುಷ ವಿಭಾಗದಲ್ಲಿ ವಾಲಿಬಾಲ್, ವೇಟ್ ಲಿಫ್ಟಿಂಗ್, ಬ್ಯಾಡ್ಮಿಂಟನ್ ಹಾಗೂ ಮಹಿಳಾ ವಿಭಾಗದಲ್ಲಿ ಖೋ ಖೋ, ಸ್ಲೋ ಸೈಕಲಿಂಗ್, 100 ಮೀಟರ್ ಓಟ ಸ್ಫರ್ಧೆ ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಲಕ್ಷ್ಮಣ್ ಪಿ.ಮಚಕುರೆ ಅವರನ್ನು ಸಂಪರ್ಕಿಸಬಹುದು- 9535230350