ತರೀಕೆರೆ | ದಲಿತರ ಭೂಮಿ, ವಸತಿ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

Date:

ದಸಂಸ ( ಅಂಬೇಡ್ಕರ್ ವಾದ ) ತಾಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿ ಆವರಣದಲ್ಲಿ ದಲಿತರ ಭೂಮಿ – ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.

- Advertisement -

ಫಾರಂ ನಂ. 50, 53, 57 ರಲ್ಲಿ ಅರ್ಜಿ ಸಲ್ಲಿಸಿರುವ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡದೆ ಶಾಸಕರ ಅಧ್ಯಕ್ಷತೆಯಲ್ಲಿರುವ ಬಗರ್ ಹುಕ್ಕುಂ ಸಮಿತಿಗಳು ನಿರ್ಲಕ್ಷ್ಯದಿಂದ ಸಭೆಗಳು ನಡೆಸದೆ ರಾಶಿಗಟ್ಟಲೆ ಅರ್ಜಿಗಳು ಕೊಳೆಯುತ್ತ ಬಿದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಾಗೆಯೇ, ತರೀಕೆರೆ ತಾಲೂಕಿನಲ್ಲಿ ಎಂಸಿ ಹಳ್ಳಿ ಗ್ರಾಮದ ಮಲ್ಲಯ್ಯನಕೆರೆ ಒತ್ತುವರಿ ಸಮಸ್ಯೆ ಬಗೆಹರಿಸದೆ ಕಾಲ ಹರಣ ಮಾಡುತ್ತಿರುವ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕೆಂದು ಮತ್ತು ತರೀಕೆರೆ ತಾಲೂಕು ಕಚೇರಿಯಲ್ಲಿ ಪಿಟಿಸಿಎಲ್ ಕೇಸಿಗೆ ಸಂಬಂಧಿಸಿದ ಭೂ ದಾಖಲಾತಿಗಳು ಅಭಿಲೇೇಕಾಲಯದಲ್ಲಿ ದಾಖಲಾತಿಗಳು ಕಣ್ಮರೆಯಾಗುತ್ತಿದ್ದು ಇದಕ್ಕೆಲ್ಲ ಕಾರಣವಾಗುತ್ತಿರುವ ಸಿಬ್ಬಂದಿಗಳನ್ನು ಅಮಾನತ್ತು ಮಾಡಬೇಕು. ಬಿ. ರಾಮನಹಳ್ಳಿ ಗ್ರಾಮದ ಗ್ರಾಮ ಠಾಣಾ ಒತ್ತುವರಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಲ್ಲಿನ ಪರಿಶಿಷ್ಟ ಜಾತಿಯವರಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು ಎಂದು ದಸಂಸ ಮುಖಂಡ ಎಚ್ ಎಸ್ ರಾಜಪ್ಪ ಈದಿನ.ಕಾಮ್ ಜೊತೆ ಮಾಹಿತಿ ವ್ಯಕ್ತಪಡಿಸಿದರು.

ಇದನ್ನೂ ಓದಿದೀರಾ?ಚಿಕ್ಕಮಗಳೂರು l ಸೌಜನ್ಯ ಪರ ಹೋರಾಟ: ಪ್ರತಿಭಟನೆಗೆ ನಿರಾಕರಿಸಿದ ಪೊಲೀಸ್ ಇಲಾಖೆ SDPI ಆರೋಪ

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಎಂ ಜೆ ರಾಮಚಂದ್ರ, ಸಂಘಟನೆಯ ಮುಖಂಡರಾದ ಅಣ್ಣಯ್ಯ, ತಾಲೂಕು ಸಂಘಟನಾ ಸಂಚಾಲಕರಾದ ಶಿವಕುಮಾರ್, ರಂಗೇನಹಳ್ಳಿ ವಿಜಯ್, ಕುಡ್ಲೂರು ಮುನಿಯಾ, ಅಹಿಂದ ಸಂಘಟನೆ ಮುಖಂಡರಾದ ಸುನಿಲ್ ಡಿ ಎನ್, ಹನುಮಂತು, ರಘು ಡಿ ಎನ್, ಇಸ್ಮಾಯಿಲ್ ರಂಗೇನಹಳ್ಳಿ, ಸಿದ್ದೀಕ್,  ವಿ ರಾಮನಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...