ಮೈಸೂರು ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದಲ್ಲಿ ಜನಗಣತಿ ಕಾರ್ಯದಲ್ಲಿ ನಿರತರಾಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಮೃತರನ್ನು ಸಿ.ಕೆ. ರಂಗನಾಥ್ (53) ಎಂದು ಗುರುತಿಸಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನವರಾಗಿದ್ದು, ಹುಣಸೂರು ತಾಲೂಕು ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಕೃಷ್ಣರಾಜನಗರದ ಕುವೆಂಪು ಬಡಾವಣೆಯಲ್ಲಿ ಜನಗಣತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಅಸ್ವಸ್ಥರಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಹೋಂಸ್ಟೇಗಳಿಗೆ ಕಠಿಣ ನಿಯಮಾವಳಿ: ಪ್ರವಾಸಿಗರ ಸುರಕ್ಷತೆಗೆ ಸರ್ಕಾರದ ಹೊಸ ಮಾರ್ಗಸೂಚಿ
This video cannot be played in your browser. Open the video directly
ಈ ಅಕಾಲಿಕ ನಿಧನದಿಂದ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿದ್ದು, ಮೃತರಿಗೆ ಸಂತಾಪ ಸೂಚಿಸಲಾಗಿದೆ.





