ಕೊಡಗು | ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ; ಸಂಶಯಾಸ್ಪದ ದೂರು

Date:

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಸಂಶಯಾಸ್ಪದ ದೂರನ್ನು ದಾಖಲಿಸಿದ್ದಾರೆ.

- Advertisement -

ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಮೃತಪಟ್ಟ ದುರ್ದೈವಿ. ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತಿದ್ದರು. ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಕಂಡು ಬಂದಿದ್ದು, ಸ್ವತಃ ಪತಿ ನಜೀರ್ ನೇಣಿನ ಕುಣಿಕೆಯಿಂದ ಬಿಡಿಸಿ ಸಫ್ರೀನಾಳನ್ನು ನಾಪೋಕ್ಲು ಖಾಸಗಿ ಆಸ್ಪತ್ರೆಗೆ ಕರೆತಂದಿರುತ್ತಾರೆ. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದೆರೆಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು. ಮೃತ ಸಫ್ರೀನ ದೇಹದ ಮೇಲೆ ಗಾಯಗಳ ಗುರುತುಗಳಿದ್ದು ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ನಿಸ್ಪಕ್ಷಪಾತ ತನಿಖೆ ನಡೆಸುವಂತೆ ಎಐಎಂಎಸ್ಎಸ್ ಮನವಿ

ಸಫ್ರೀನ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆನ್ನಾಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...