ಬೀದರ್‌ | ಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕರು ಕ್ಷೇತ್ರದಲ್ಲಿ ಇರುವುದು ಬೇಡ : ಶಾಸಕ ಪ್ರಭು ಚವ್ಹಾಣ

Date:

ಔರಾದ್‌ ತಾಲ್ಲೂಕಿನ ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬರುತ್ತಾರೆ. ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂತಹ ಶಿಕ್ಷಕರು ನನ್ನ ಕ್ಷೇತ್ರದಲ್ಲಿ ಇರುವುದು ಬೇಡ ಎಂದು ಶಾಸಕ ಪ್ರಭು ಚವ್ಹಾಣ ಖಡಕ್‌ ಸೂಚನೆ ನೀಡಿದರು.

- Advertisement -

ಔರಾದ ತಾಲ್ಲೂಕಿನ ಗಣೇಶಪೂರ(ಎ), ಬೋರಾಳ, ತುಳಜಾಪೂರ, ಎಕಲಾರ, ಕೊಳ್ಳುರ, ಬರದಾಪೂರ, ಲಿಂಗದಳ್ಳಿ(ಕೆ), ನಾಗೂರ(ಎನ್) ಹಾಗೂ ನಾಗೂರ(ಎಂ)ನಲ್ಲಿ ಬುಧವಾರ ಗ್ರಾಮ ಸಂಚಾರ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರಲ್ಲದೇ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕರಿಂದ ಮಕ್ಕಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಕ್ಷಕರನ್ನು ಗುರುತಿಸಿ ಕಾನೂನಿನ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಿ ಬೇರೆಡೆ ಕಳುಹಿಸಬೇಕುʼ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರುʼ

ʼಗ್ರಾಮ ಸಂಚಾರದ ಸಂದರ್ಭದಲ್ಲಿ ನಾನು ಪ್ರತಿ ಶಾಲೆಗೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದೇನೆ. ಅನೇಕ ಶಾಲೆಗಳಲ್ಲಿ ಅವ್ಯವಸ್ಥೆ ಎದ್ದು ಕಾಣಿಸುತ್ತಿದೆ. ಬೆರಳೆಣಿಕೆಯಷ್ಟು ಶಾಲೆಗಳನ್ನು ಹೊರತುಪಡಿಸಿ ಬಹಳಷ್ಟು ಶಾಲೆಗಳಲ್ಲಿ ಮಕ್ಕಳ ಕೊರತೆಯಿದೆ. ಶಿಕ್ಷಕರ ಸಮಸ್ಯೆಯೂ ಮಕ್ಕಳ ಕಲಿಕೆಗೆ ಅಡ್ಡಿಯಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸಬೇಕುʼ ಎಂದರು.‌

ಬಯೋಮೆಟ್ರಿಕ್ ವ್ಯವಸ್ಥೆಯಿದ್ದರೂ ಶಿಕ್ಷಕರು ಗೈರಾಗುವುದು ನಿಂತಿಲ್ಲ :

ʼಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಸುಧಾರಣೆಗೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಲಾಗುತ್ತಿದೆ. ಆದರೂ ಶಿಕ್ಷಕರು ಕೆಲಸಕ್ಕೆ ಗೈರಾಗುವುದು ನಿಂತಿಲ್ಲ. ಸಾಕಷ್ಟು ಕಡೆಗಳಲ್ಲಿ ಶಿಕ್ಷಕರು ಸಮಯಕ್ಕೆ ಶಾಲೆಗೆ ಹೋಗುತ್ತಿಲ್ಲವೆಂಬ ದೂರುಗಳು ಬರುತ್ತಿವೆ. ಇವುಗಳನ್ನು ಕೂಡಲೇ ಸರಿಪಡಿಸಬೇಕಕು ಎಂದು ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

WhatsApp Image 2025 01 23 at 8.59.11 AM

ʼನಾನು ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದು, ಉತ್ತಮ ತರಗತಿ ಕೋಣೆಗಳು, ಶುದ್ದ ಕುಡಿಯುವ ನೀರು, ಆಟದ ಮೈದಾನ, ಡಿಜಿಟಲ್ ಕ್ಲಾಸ್‌ರೂಮ್ ನಂತಹ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಇನ್ನು ಏನು ಬೇಕೆಂದರೂ ಕೊಡಲು ಸಿದ್ದ. ಆದರೆ ಶಿಕ್ಷಕರು ಸರಿಯಾಗಿ ಕೆಲಸ ಮಾಡಬೇಕು. ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಬೇಕುʼ ಎಂದು ಶಿಕ್ಷಕರಿಗೆ ಹೇಳಿದರು.

ʼಕ್ಷೇತ್ರದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ಶಾಲೆಗಳಲ್ಲಿ ಮಕ್ಕಳಿಲ್ಲದಿದ್ದರೆ ಶಾಲೆಗಳು ಮುಚ್ಚಿ ಹೋಗುವ ಆತಂಕವಿರುತ್ತದೆ. ಹಾಗಾಗಿ ಸಾರ್ವಜನಿಕರು ಕೂಡ ಈ ದಿಶೆಯಲ್ಲಿ ಜವಾಬ್ದಾರಿತನ ತೋರಿಸಬೇಕು. ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದೇ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿಸಬೇಕುʼ ಎಂದು ಶಾಸಕರು ಜನರಲ್ಲಿ ಮನವಿ ಮಾಡಿಕೊಂಡರು.

ಉತ್ತಮ ಶಾಲೆಯ ಮುಖ್ಯಗುರುಗಳಿಗೆ ಸನ್ಮಾನ:

ಗ್ರಾಮ ಸಂಚಾರದ ವೇಳೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಶಾಸಕರು, ಶಾಲೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಗಣೇಶಪೂರ ಶಾಲೆ ಮುಖ್ಯಗುರು ಸಂಜು ಬಿರಾದಾರ, ಎಕಲಾರ ಮುಖ್ಯಗುರು ಪ್ರಭು ಬಾಳೂರೆ ಹಾಗೂ ಕೊಳ್ಳುರ ಶಾಲೆಯ ಮುಖ್ಯಗುರು ಕಲ್ಲಪ್ಪ ಬೋರಾಳೆ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು.

ʼಎಲ್ಲ ಶಾಲೆಗಳಲ್ಲಿಯೂ ಇದೇ ರೀತಿಯ ಕೆಲಸಗಳಾಗಬೇಕು. ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳ ಹಾಜರಾತಿ ಹೆಚ್ಚಾಗಬೇಕು. ತರಗತಿಗಳು ಸರಿಯಾಗಿ ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

WhatsApp Image 2025 01 23 at 8.58.15 AM
ಎಕಲಾರ ಪ್ರಾಥಮಿಕ ಶಾಲೆಯ ಮುಖ್ಯಗುರು ಪ್ರಭು ಬಾಳೂರೆ ಅವರನ್ನು ಶಾಸಕರು ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಈ ಸಂದರ್ಭದಲ್ಲಿ ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ವಸಂತ ಬಿರಾದಾರ, ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ಸಚಿನ್ ರಾಠೋಡ, ರಮೇಶ ಉಪಾಸೆ, ಖಂಡೋಬಾ ಕಂಗಟೆ, ದಯಾನಂಧ ಘೂಳೆ, ಸಂತೋಷ ಪೋಕಲವಾರ, ಕೇರಬಾ ಪವಾರ, ಸಂಜು ವಡೆಯರ್, ಸಚಿನ ಬಿರಾದಾರ, ರಾಜಪ್ಪ ಸೋರಾಳೆ, ಸಾಗರ ಪಾಟೀಲ, ಶಿವಾಂಜಯ ಬಿರಾದಾರ ಅಧಿಕಾರಿಗಳಾದ ಸುಭಾಷ, ರವಿ ಕಾರಬಾರಿ, ಡಾ.ಗಾಯತ್ರಿ, ಧೂಳಪ್ಪ, ವೆಂಕಟರಾವ ಶಿಂಧೆ, ಇಮಲಪ್ಪಾ ಸೇರಿದಂತೆ ವಿವಿಧ ಇಲಾಖೆಗಳ ಆಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...