ಮಂಡ್ಯ | ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳು; ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

Date:

ಮಂಡ್ಯದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ನಡೆದ ಎಸ್ಐಆರ್ ಕುರಿತ ತರಬೇತಿ ಶಿಬಿರದಲ್ಲಿ ಮಾತನಾಡಿದ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ‘ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳಿದ್ದು, ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -

ಮತದಾರರ ಪಟ್ಟಿಯಲ್ಲಿ ಅರ್ಹ ನಾಗರಿಕರ ಹೆಸರು ಉಳಿಯುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯ ವಿಷಯವಲ್ಲ; ಅದು ಸಂವಿಧಾನಿಕ ಮತದಾನದ ಹಕ್ಕಿನ ಪ್ರಶ್ನೆಯಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಹಲವೆಡೆ ತಾಂತ್ರಿಕ ದೋಷಗಳು, ಮಾಹಿತಿಯ ಹೊಂದಾಣಿಕೆಯ ಸಮಸ್ಯೆಗಳು ಹಾಗೂ ನೆಲಮಟ್ಟದಲ್ಲಿ ಸ್ಪಷ್ಟ ಮಾರ್ಗದರ್ಶನದ ಕೊರತೆ ಕಂಡು ಬರುತ್ತಿದೆ. ಇನ್ನೂ ಎನ್ಯೂಮರೇಷನ್ ಫಾರ್ಮ್‌ಗಳ ಭರ್ತಿ ಮತ್ತು ದಾಖಲೆ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿಲ್ಲ. ಆದರೆ, ಮುಂದಿನ ಹಂತದಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಪೂರ್ವ ಸಿದ್ಧತೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇವಲ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳ್ಳುವುದರಿಂದ ಮತದಾರರ ಹೆಸರು ಸಂಪೂರ್ಣವಾಗಿ ಸುರಕ್ಷಿತವಾಗುವುದಿಲ್ಲ. ಎನ್ಯೂಮರೇಷನ್ ಹಂತ ಆರಂಭವಾದಾಗ ಫಾರ್ಮ್‌ಗಳ ಸರಿಯಾದ ಭರ್ತಿ, ಅಗತ್ಯ ದಾಖಲೆಗಳ ಸಿದ್ಧತೆ ಹಾಗೂ ತಾಂತ್ರಿಕ ತಿಳುವಳಿಕೆ ಬಹುಮುಖ್ಯವಾಗಿರುತ್ತದೆ. ಆದ್ದರಿಂದ, ಕಾರ್ಯಕರ್ತರು ಮತ್ತು ಸಾರ್ವಜನಿಕರು ಈಗಿನಿಂದಲೇ ಜಾಗೃತರಾಗಬೇಕು. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದಲ್ಲಿ ಕಾರ್ಯನಿರತ ಎಸ್‌ಡಿಪಿಐ ವಾಲಂಟಿಯರ್‌ಗಳು ಮತ್ತು ಬೂತ್ ಲೆವೆಲ್ ಸಹಾಯಕರು (ಬಿಎಲ್ಓ)ಗಳಿಗೆ ವಿಡಿಯೋ ಹಾಗೂ ಪಿಪಿಟಿ ಆಧಾರಿತ ಪೂರ್ವಭಾವಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಕಾರ್ಯಾಗಾರದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷ ಮುಕ್ತಿಯಾರ್, ಮುಬಾರಕ್, ಅಫ್ರೋಜ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...