ಅಕ್ರಮ ಆಸ್ತಿ ಗಳಿಕೆ | 150 ಎಕರೆ ಒಡೆಯ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

Date:

  • ಅಜಿತ್​ ರೈಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
  • 2022 ನವೆಂಬರ್‌ನಲ್ಲಿ ಅಮಾನತು ಆಗಿದ್ದ ಅಜಿತ್​ ಕುಮಾರ್ ರೈ

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಗುರುವಾರ ಕೆಆರ್​ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಬಂಧಿಸಿದ್ದಾರೆ.

- Advertisement -

ಅಜಿತ್​ ರೈ ಅವರಿಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದಾಳಿ ವೇಳೆ ಅಜಿತ್ ರೈಗೆ ಸೇರಿದ 150 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪರಿಶೀಲನೆ ನಡೆಸಿ ಅಜಿತ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮೂಲಗಳ ಪ್ರಕಾರ ಹಾರ್ಸ್ ರೈಡಿಂಗ್ ಸ್ಕೂಲ್ ಮಾಡಲು ತಯಾರಿ ನಡೆಸುತ್ತಿದ್ದ ಅಜಿತ್ ರೈ ವರ್ಷಕ್ಕೆ ಒಂದು ಕೋಟಿಗೂ ಅಧಿಕ ಆದಾಯ ಹೊಂದಿದ್ದಾರೆ ಎನ್ನಲಾಗಿದೆ. ಆದರೂ ಇರುವ ಆದಾಯ, ದೊರೆತಿರುವ ಆಸ್ತಿಗಳು ಹಾಗೂ ಐಷಾರಾಮಿ ವಸ್ತುಗಳಿಗೆ ತಾಳೆ ಮಾಡಿದಾಗ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯಕ್ಕೆ ಬರೆ ಎಳೆದ ಸರ್ಕಾರ!

ಅಮಾನತುಗೊಂಡಿದ್ದ ಅಜಿತ್‌ ರೈ

ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿದ ಅರೋಪದಡಿ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿದ್ದ ಅಜಿತ್‌ ಕುಮಾರ್ ರೈಯನ್ನು ಸರ್ಕಾರ 2022, ನವೆಂಬರ್‌ನಲ್ಲಿ ಅಮಾನತು ಮಾಡಿತ್ತು. ಈ ಪ್ರಕರಣದಲ್ಲಿ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ಒತ್ತುವರಿದಾರರಿಗೆ ಸಹಕಾರ ನೀಡುವ ಮೂಲಕ ಕಾನೂನಾತ್ಮಕವಾಗಿ ತೆರವು ಮಾಡದಂತೆ ನೋಡಿಕೊಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.

ಅಮಾನತು ಆದೇಶದ ವಿರುದ್ದ ಕೆಎ‌ಟಿಯಲ್ಲಿ ಪ್ರಶ್ನಿಸಿ ತಡೆ ತೆರವು ಮಾಡಿದ್ದ ಅಜಿತ್ ರೈ ಮತ್ತೆ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿ ನೇಮಕಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...