ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿಯೇ ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಗ್ರಾಮದ ಮುಸ್ಲಿಮರ ವಿರುದ್ದ ಅತ್ಯಂತ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿತು.
ದೇವಸ್ಥಾನದ ಮುಖ್ಯಸ್ಥ ನಾಗಭೂಷಣ್ ರಾವ್ ಅವರ ನೇತೃತ್ವದಲ್ಲಿ ಸಂಧಾನ ಸಭೆಯು
ನಡೆಯಿತು.
ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿದ್ದ ಗಣ್ಯರ, ಉದ್ಯಮಿಗಳ, ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳ ಮಧ್ಯೆಯೇ ಇಂತಹ ಘಟನೆ ನಡೆದಿರುವುದರ ಬಗ್ಗೆ ಸ್ಥಳೀಯ ಮುಸ್ಲಿಂ ಒಕ್ಕೂಟ ದೇವಸ್ಥಾನದ ಆಡಳಿತ ಮಂಡಳಿಗೆ ತಮ್ಮ ನಿಲುವಿನ ಕುರಿತು ಸ್ಪಷ್ಠಪಡಿಸುವಂತೆ ಪತ್ರ ಬರೆದಿತ್ತು.ಇದಕ್ಕೆ ಸ್ಪಷ್ಟೀಕರಣ ನೀಡುವ ಸಲುವಾಗಿ ಹಿಂದೂ – ಮುಸ್ಲಿಂ ಮುಖಂಡರ ಸಭೆ ನಡೆಸಲಾಯಿತು.
ಸಭೆಯಲ್ಲಿ ಘಟನೆ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿತು ಎಂದು ತಿಳಿದು ಬಂದಿದೆ.

ಸ್ಥಳೀಯ ಮುಸ್ಲಿಮರು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ ಸಹಕಾರಗಳನ್ನು ಮಾಡಿದ್ದರು. ಮುನೀರ್ ಎಂಬವರು ಮರವನ್ನು ನೀಡಿದ್ದರು, ಅಬ್ಬಾಸ್ ಎಂಬವರು ವೇದಿಕೆ ನಿರ್ಮಿಸಲು ಸ್ಥಳವನ್ನು ನೀಡಿದ್ದರು, ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಟಿ.ಎಚ್ ಉಸ್ತಾದರ ಮಕ್ಕಳ ಒಡೆತನದ ಜಮೀನಿನಲ್ಲಿ ನೀಡಲಾಗಿತ್ತು, ನೀರಿನ ವ್ಯವಸ್ಥೆಗೆ ಮತ್ತು ಅನ್ನ ಸಂತರ್ಪಣೆಗೆ ಮುಸ್ಲಿಮರ ಜಾಗವನ್ನೇ ಉಪಯೋಗಿಸಲಾಗಿತ್ತು. ಇದಲ್ಲದೆ ಆರ್ಥಿಕವಾಗಿಯೂ ಗ್ರಾಮದ ಮುಸ್ಲಿಮರು ದೇವಸ್ಥಾನಕ್ಕೆ ಸಹಾಯವನ್ನು ನೀಡಿದ್ದರು. ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಸ್ಥಳೀಯ ಮುಸ್ಲಿಮರು ಬ್ಯಾನರ್ ಗಳನ್ನು ಅಳವಡಿಸಿದ್ದರ ಬಗ್ಗೆ ಮುಸ್ಲಿಂ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಗಮನ ಸೆಳೆದರು.

ಮುಸ್ಲಿಮರ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿ ಭಾಷಣಗಳನ್ನು ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿಯೇ ನೀಡಿದ್ದರಿಂದ ಘಟನೆಯ ಹೊಣೆ ಹೊತ್ತುಕೊಂಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿಯು ಸ್ಥಳೀಯ ಒಕ್ಕೂಟದ ಮುಸ್ಲಿಂ ಮುಖಂಡರಿಗೆ ವಿಷಾದ ವ್ಯಕ್ತಪಡಿಸಿ ಪತ್ರವನ್ನು ನೀಡಿದ್ದು, ಪ್ರಕರಣವನ್ನು ಅಂತ್ಯಗೊಳಿಸಲು ಮನವಿ ಮಾಡಿದೆ.
ಘಟನೆಯ ಹಿನ್ನೆಲೆ:
ದಿನಾಂಕ 03.05.2025 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು, ತೆಕ್ಕಾರು ಇಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಮಾರೋಪ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ, ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ದಿನ ಬೆಳಗಾದರೆ ಡೀಸೆಲ್ ಕದಿಯುತ್ತಾರೆ. ತೆಕ್ಕಾರು ಗ್ರಾಮದಲ್ಲಿ ಹಿಂದೂಗಳದ್ದು 150 ಮನೆಗಳು, 1200 ಕುಟುಂಬಗಳಿರುವುದು ಮುಸ್ಲಿಮರದ್ದು. ಇನ್ನು ಒಂದು ಹತ್ತು ವರ್ಷ ಕಳೆದರೆ 1200 ಇರುವ ಮುಸ್ಲಿಮರ ಸಂಖ್ಯೆ 600 ಕ್ಕೆ ಇಳಿಯುವುದಿಲ್ಲ. ಇನ್ನು ಹತ್ತು ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5000 ದಿಂದ 10000 ಆಗುತ್ತದೆ ಎಂದು ಸ್ಥಳೀಯ ಹಿಂದೂ ಬಾಂಧವರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಮತ್ತು ಪ್ರಚೋದಿಸಿ, ಉದ್ರೇಕಗೊಳಿಸುವ ಕಾರ್ಯಕ್ಕೆ ಶಾಸಕರು ಮುಂದಾಗಿದ್ದರು.

ತಾಲೂಕಿನಲ್ಲಿಯೇ ಅತ್ಯಂತ ಹೆಚ್ಚಿನ ಮುಸ್ಲಿಮರು ವಾಸವಿರುವ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿಯೇ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರಿಂದ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಿಯಾರ್ ಎಂಬವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು.
ಈ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಸದ್ಯ ಪ್ರಕರಣವು ಹೈಕೋರ್ಟ್ ಮೆಟ್ಟಿಲೇರಿದ್ದು, ಮೇ 20ರಂದು ವಿಚಾರಣೆಗೆ ಬರಲಿದೆ. ಈ ಮಧ್ಯೆ ಪ್ರಕರಣಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇಂತಹ ವ್ಯಕ್ತಿಗಳು ದೇಶದಲ್ಲಿ ಕೋಮು ಗಲಭೆಗೆ ಕಾರಣ ಇಂತವರನ್ನು ಚುನಾಯಿತರಾಗಿ ಮಾಡಿದವರು ಅತೀ ಅಪಾಯದ ಮತದಾರರು
Actually hindu and muslims are in good relationship,these political leaders are misguide them and gain votes, that’s all