ರಾಜ್ಯದ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳ ತಾಪಮಾನ 37 ಡಿಗ್ರಿಗೆ ಏರಿಕೆ: ಹವಾಮಾನ ಇಲಾಖೆ

Date:

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಭಾನುವಾರ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗೆ ದಾಟಿದೆ. ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ 7 ಜಿಲ್ಲೆಗಳ ಉಷ್ಣಾಂಶ ಭಾನುವಾರ 37 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ 39.2 ಮತ್ತು ಚಿಕ್ಕಮಗಳೂರಿನಲ್ಲಿ 38.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೊಡಗು ಜಿಲ್ಲೆಯ ತಾಪಮಾನವು ಭಾನುವಾರ ಸಾಮಾನ್ಯ ತಾಪಮಾನಕ್ಕಿಂತ ಸುಮಾರು ಒಂಬತ್ತು ಡಿಗ್ರಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಮಾರ್ಚ್‌ ವೇಳೆ ಸರಾಸರಿ ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ಐಎಂಡಿ ತಿಳಿಸಿದೆ.

ಫೆಬ್ರವರಿಯಲ್ಲಿ ದಾಖಲೆಯ ತಾಪಮಾನದ ನಂತರ, ಮೈಸೂರು ಜಿಲ್ಲೆಯಲ್ಲಿಯೂ ಬಿಸಿಗಾಳಿ ಹೆಚ್ಚಾಗಿದೆ. ಇದರಿಂದಾಗಿ ಮಹಾಶಿವರಾತ್ರಿ ವೇಳೆ ಬರಬೇಕಿದ್ದ ಮಳೆ ಕೈತಪ್ಪಿದೆ. ತಾಪಮಾನವು ಏರುತ್ತಿರುವುದರಿಂದ ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ.‌

ಈ ಸುದ್ದಿ ಓದಿದ್ದೀರಾ? ಹವಾಮಾನ ವರದಿ | ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮುಂಗಾರಿಗೂ ಮೊದಲೇ ಮಳೆ ಬೀಳುವ ಸಾಧ್ಯತೆ

ಜಿಲ್ಲೆಯ ತಲಕಾಡು ಹೋಬಳಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್ಎನ್‌ಡಿಎಂಸಿ) ಅಂಕಿ ಅಂಶಗಳು ತಿಳಿಸಿವೆ.

ಫೆಬ್ರವರಿ ವೇಳೆ ಮೈಸೂರಿನಲ್ಲಿ ಮೂರು ಬಾರಿ 35 ಡಿಗ್ರಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು. ಮುಂಗಾರು ಪೂರ್ವ ಮಳೆ ಬೀಳದಿದ್ದರೆ ಮುಂದಿನ ದಿನಗಳಲ್ಲಿ ತಾಪಮಾನವು 40 ಡಿಗ್ರಿಗೂ ದಾಟಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...