ಕಲಬುರಗಿ, ಬೀದರ್‌ನಲ್ಲಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

Date:

ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಲಾರಂಭಿಸಿದ್ದು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಉಷ್ಣಾಂಶವು 44 ಡಿಗ್ರಿ ಸೆಲ್ಸಿಯಸ್‌ ದಾಟಿದೆ.

- Advertisement -

ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ ಅತ್ಯಧಿಕ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬೀದರ್ ಸೋಮವಾರ, ಮಂಗಳವಾರ ಕ್ರಮವಾಗಿ 44.5, 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 44.5, 43.1 ಡಿಗ್ರಿ ಸೆಲ್ಸಿಯಸ್‌ ವರದಿಯಾಗಿದೆ.

ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಯಾದಗಿರಿಯಲ್ಲಿ 42.9, ರಾಯಚೂರಲ್ಲಿ 42.9, ಬಳ್ಳಾರಿಯಲ್ಲಿ 41.3, ಕೊಪ್ಪಳ 40.6 ಹಾಗೂ ಬೆಳಗಾವಿ ವಿಭಾಗದಡಿ ಬರುವ ವಿಜಯಪುರ 42.8, ಬೆಳಗಾವಿ 41.9, ಬಾಗಲಕೋಟೆ 41.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

‘ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ದಾಖಲಾದ ಅಧಿಕ ಉಷ್ಣಾಂಶ ಈ ವರ್ಷದ ಅತಿ ಹೆಚ್ಚು ತಾಪಮಾನ ಆಗಿದೆ. ಏಪ್ರಿಲ್ ತಿಂಗಳಲ್ಲಿ ಉಷ್ಣಾಂಶವು ಗಣನೀಯ ಏರಿಕೆ ಕಾಣುತ್ತಿದೆ. ಇದು ಇನ್ನೂ ಕೆಲ ದಿನಗಳ ಕಾಲ ಹೀಗೆ ಇರಲಿದೆ’ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನಲೆ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಬಿಸಿಲಿನ ವೇಳೆ ಹೊರಹೋಗದೆ ಆರೋಗ್ಯ ಕಡೆ ಗಮನಹರಿಸಬೇಕು’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...