ಉಡುಪಿ | ಈಜಲು ಹೋದ ಹತ್ತನೇ ತರಗತಿ ವಿದ್ಯಾರ್ಥಿ ಅಸಹಜ ಸಾವು !

Date:

ಉಡುಪಿ ಜಿಲ್ಲೆಯ ಹಿರಿಯಡಕದ ಸರಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

- Advertisement -

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ನಿನ್ನೆ ದಿನ ಮಧ್ಯಾಹ್ನ 12.15 ಗಂಟೆ ಸುಮಾರಿಗೆ ವಿದ್ಯಾರ್ಥಿಯು ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪೆರ್ಡೂರಿಗೆ ತೆರಳಿದ್ದು, ಅಲ್ಲಿ ತಂದೆಯನ್ನು ಬಿಟ್ಟು ಅಜ್ಜಿ ಮನೆಯಾದ ಅಲಂಗಾರಿಗೆ ಹೋಗಿದ್ದಾನೆ. ನಂತರ ಅಜ್ಜಿ ಮೊಬೈಲ್‌ನಿಂದ ತಂದೆಗೆ ಕರೆ ಮಾಡಿ, ತಾನು ಅಜ್ಜಿ ಮನೆ ಬಳಿ ಇರುವ ನದಿಗೆ ಆಟವಾಡಲು ಹೋಗುವುದಾಗಿ ತಿಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ತಂದೆಯು ಅಜ್ಜಿ ಮನೆಗೆ ಕರೆ ಮಾಡಿ ವಿಚಾರಿಸಿದಾಗ, ಹುಡುಗ ಅಜ್ಜಿ ಮನೆಗೂ ಬಂದಿಲ್ಲವೆಂದು ತಿಳಿದುಬಂದಿದೆ. ಕೂಡಲೇ ಕುಟುಂಬಸ್ಥರು ಅಲಂಗಾರು, ಪೆರ್ಡೂರು ಹಾಗೂ ಸುತ್ತಮುತ್ತ ಹುಡುಕಾಟ ನಡೆಸಿದರೂ ವಿದ್ಯಾರ್ಥಿ ಪತ್ತೆಯಾಗಿರಲಿಲ್ಲ. ಈ ಕುರಿತು ವಿದ್ಯಾರ್ಥಿಯ ತಂದೆಯ ದೂರು ಆಧರಿಸಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹುಡುಕಾಟ ನಡೆಸಿದ್ದರು.

ಇಂದು ಪೆರ್ಡೂರು ಅಡಪಾಡಿಯ ಮಡಿಸಾಲು ಹೊಳೆಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಈತನು ಹೊಳೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿರ ಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...