ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್ ದಾಬಾ ಬಳಿ ಮಹಿಂದ್ರಾ ಶನಿವಾರ ನಸುಕಿನ ಜಾವ ನಡೆದಿದೆ.
ಮೃತರು ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಇವರ ಪತ್ನಿ ಸಂಗೀತಾ (45) ಹಾಗೂ ಪುತ್ರ ಉತ್ತಮ ರಾಘವನ (28) ಮೃತರು. ಮೃತ ಕಾರು ಚಾಲಕನ ಗುರುತು ಇನ್ನೂ ಪತ್ತೆ ಆಗಿಲ್ಲ.
ಇವರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು, ಕಲಬುರಗಿ ಜಿಲ್ಲೆಯ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವರ ದರ್ಶನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರ ಬರುವವರೆಗೆ ನಿಖರ ಮಾಹಿತಿ ಗೊತ್ತಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಕ್ಫ್ ವಿಚಾರ | ಯಾವತ್ತೂ ಈ ರೀತಿ ಆಗಿಲ್ಲ: ಜೆಪಿಸಿ ಅಧ್ಯಕ್ಷರ ನಡೆಗೆ ಸದಸ್ಯರಿಂದಲೇ ವಿರೋಧ
ಘಟನಾ ಸ್ಥಳಕ್ಕೆ ಸಿಪಿಐ ಶಿವಶಂಕರ ಸಾಹು, ಮಹಾಗಾವ ಠಾಣೆ ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ ಪರಿಶೀಲಿಸಿದರು, ಮೃತ ದೇಹಗಳನ್ನು ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.