ಬೀದರ್ | ಭೀಕರ ಅಪಘಾತ; ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವು

Date:

ಎರಡು ಕಾರು ಮತ್ತು ಒಂದು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಬೀದರ್ – ಔರಾದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಧರಿ ಹನುಮಾನ ದೇವಾಸ್ಥಾನದ ಬಳಿ ಗುರುವಾರ ಸಂಜೆ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಔರಾದ ತಾಲೂಕಿನ ಧುಪತಮಹಾಗಾಂವ ಗ್ರಾಮದ ಸುಖದೇವ್ (38) ಹಾಗೂ ಲಾಧಾ ಗ್ರಾಮದ ಸಿದ್ದು ಮುಚಳಂಬೆ (40) ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾವನ್ನಪ್ಪಿದ ಇಬ್ಬರೂ ಜೆಸ್ಕಾಂ ಇಲಾಖೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಿಸಿ ಗ್ರಾಮದಿಂದ ಸಂತಪೂರ ಜೆಸ್ಕಾಂ ಕಚೇರಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಎರಡು ಕಾರುಗಳ ಮುಖಾಮುಖಿಯಾಗಿ ಢಿಕ್ಕಿಯಾಗಿವೆ. ಈ ವೇಳೆ, ಬೈಕ್‌ಗೆ ಕಾರು ಅಪ್ಪಳಿಸಿದ್ದು, ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಸಂತಪೂರ ಪೊಲೀಸರು, ಔರಾದ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಹಾಗೂ ಪಿಇಎಸ್ ಮೆಹಬೂಬ್ ಅಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...