ಪಕ್ಕದ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಸಮುದ್ರ ತೀರದಲ್ಲಿ ಭೀಕರ ದುರಂತ ಸಂಭವಿಸಿದ್ದು, ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲೋಂಡಾ ಗ್ರಾಮದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದಲ್ಲಿ ಈಜಲು ಇಳಿದಾಗ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.
ದಸರಾ ರಜೆಯ ಪ್ರಯುಕ್ತ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿ ಎಂಟು ಮಂದಿ ಕಾಣೆಯಾಗಿದ್ದು, ಇದರಲ್ಲಿ ಮೂವರ ಶವ ಪತ್ತೆಯಾಗಿವೆ. ಫರಿನ್ ಇರ್ಫಾನ್ ಕಿತ್ತೂರ (34), ಇಬಾದ್ ಕಿತ್ತೂರ (13), ಅಳ್ನಾವರ ಮೂಲದ ನಮೀರಾ ಅಕ್ತರ್ (16) ಮೃತರು.
ಇದನ್ನೂ ಓದಿ: ಬೆಳಗಾವಿ | ಗುಂಡುರಾವ ಕರಿಗಾರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ
ಲೋಂಡಾದ ಪ್ರಹಾನಾ ಕಿತ್ತೂರ (34) ಅವರನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಪ್ರಸ್ತುತ ಅವರು ಗಂಭೀರ ಸ್ಥಿತಿಯಲ್ಲಿ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
