ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

Date:

  • ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ
  • ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರ ಪಾಠ ಏಕೆ ಬೇಡಾ?: ಸಿ ಟಿ ರವಿ

ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ. 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, “ಹೆಡ್ಗೆವಾರ್​ ಪಾಠ, ಚಕ್ರವರ್ತಿ ಸೂಲಿಬೆಲೆ ಬರೆದ ಪಾಠ ವಾಪಸ್ ಪಡೆಯುವುದಾಗಿ ಹೇಳಿದೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

“ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್​ ಉದ್ದೇಶಪೂರ್ವಕವಾಗಿ​ ರಾಜಕಾರಣ ಮಾಡುತ್ತಿದೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಇದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳಲಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಪಿಎಚ್‌ಡಿ ಮಾಡಿದವರ ಪಾಠ ನಮ್ಮ ಮಕ್ಕಳಿಗೆ ಬೇಡ: ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ನಾಯಕರ ಪಾಠ ಯಾಕೆ ಓದಬಾರದು?: ಸಿಟಿ ರವಿ ಪ್ರಶ್ನೆ

ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರದ್ದು ಯಾಕೆ ಓದಬಾರದು? ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ” ಎಂದರು.

“ಆರ್‌ಎಸ್‌ಎಸ್‌ ವಿಚಾರದಲ್ಲಿ ನೆಹರು, ಇಂದಿರಾ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ‌ ಅಂಡಮಾನ್ ಜೈಲಿಗೆ ಹಾಕಲಿಲ್ಲ” ಎಂದು ಪ್ರಶ್ನಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...