ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ರಾಜ್ಯ ನಾಯಕರಿಗೆ ಸೂತ್ರ ಮುಂದಿಟ್ಟ ಎಐಸಿಸಿ ವರಿಷ್ಠರು

Date:

  • ಚುನಾವಣೆ ಸಿದ್ಧತೆ ದೃಷ್ಟಿಯಿಂದ ಎಐಸಿಸಿಯಿಂದ ಮೊದಲ ಹಂತದ ಸಭೆ
  • ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಸಿದ್ಧತೆ ದೃಷ್ಟಿಯಿಂದ ಮೊದಲ ಹಂತದ ಸಭೆಯನ್ನು ಎಐಸಿಸಿ ಬುಧವಾರ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ನಡೆಸಿತು.

- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸಭೆಯಲ್ಲಿ ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದಕ್ಕಾಗಿ ಸೂತ್ರವೊಂದನ್ನು ಎಐಸಿಸಿ ವರಿಷ್ಠರು ರಾಜ್ಯ ನಾಯಕರ ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಈಗಾಗಲೇ ಜಾರಿಗೊಳಿಸಲು ಹೊರಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು, ಯೋಜನೆಯ ಫಲಾನುಭವಿಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು ಎಂದು ಸೂಚಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಧರ್ಮದ ಹೆಸರಲ್ಲಿ ಜನರು ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ : ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ವರಿಷ್ಠರ ಸೂಚನೆಗಳೇನು?

  • ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಬೇಕು.
  • ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ತಡವಾಗದೇ, ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಿ ಆದಷ್ಟು ಬೇಗ ಅಖಾಡಕ್ಕೆ ಬಿಡಬೇಕು.
  • ಎಲ್ಲ ಸಮುದಾಯಗಳನ್ನು ಒಗ್ಗೂಡಿಸುವ ಕಾರ್ಯಕ್ರಮ ರೂಪಿಸಿ, ಬಿಜೆಪಿಯ ಹಿಂದೂ ಮುಸ್ಲಿಂ ವಿಭಜನೆ ತಂತ್ರಕ್ಕೆ ಪ್ರತಿತಂತ್ರ ಹೆಣೆಯಬೇಕು.
  • ಪಕ್ಷದ ಕಾರ್ಯಕರ್ತರ ಜತೆ ಎಲ್ಲ ಸಚಿವರು ಸಂಪರ್ಕದಲ್ಲಿದ್ದು, ಯಾವ ಸಚಿವರ ವಿರುದ್ಧವೂ ದೂರು ಬರದಂತೆ ನೋಡಿಕೊಳ್ಳಬೇಕು.
  • ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಕಚೇರಿ ಇರಬೇಕು, ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಬೇಕು.
  • ಜನರ ಪರವಾಗಿದ್ದರೆ ಯೋಚಿಸಿದರೆ ಜನರು ಕೈ ಹಿಡಿಯುತ್ತಾರೆ ಎಂಬುದಕ್ಕೆ ಕರ್ನಾಟಕ ಚುನಾವಣೆ ಫಲಿತಾಂಶ ಸಾಕ್ಷಿ, ಹೀಗಾಗಿ ಜನಪರ ಪಕ್ಷ ಕಾಂಗ್ರೆಸ್ ಎಂಬುದು ಮತ್ತೆ ಮತ್ತೆ ಪ್ರಚಾರಮಾಡಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...