ಕಾರಂಜಾ ಜಲಾಶಯದ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟ ಧಾರುಣ ಘಟನೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಫಾರೂಕ್ (20) ಹಾಗೂ ಮೊಹಮ್ಮದ್ ಅತೀಫ್ (18) ಮೃತ ಸಹೋದರರು.
ಗ್ರಾಮದ ಹೊರವಲಯದಲ್ಲಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ನೀರು ತರಲು ಹೋದ ಅತೀಫ್ ಕಾಲು ಜಾರಿ ಬಿದ್ದು, ಕೊಚ್ಚಿಕೊಂಡು ಹೋಗುತ್ತಿದ್ದಾಗ ಸಹೋದರ ಫಾರೂಕ್ ತಮ್ಮನಿಗೆ ಕಾಪಾಡಲು ಮುಂದಾಗಿದ್ದಾನೆ. ನೀರಿನ ರಬಸಕ್ಕೆ ಇಬ್ಬರೂ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.
ಈ ಕುರಿತು ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ವಿಶ್ವರಾಧ್ಯ ಹಾಗೂ ಭಾಲ್ಕಿ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಭೇಟಿ ನೀಡಿ ಪರಿಶೀಲಿಸಿದರು.