ಯಡಿಯೂರಪ್ಪಗೆ ಸೆಡ್ಡು ಹೊಡೆಯುವುದಕ್ಕೆ ಸಂತೋಷ್ ಸಭೆ:‌ ಕಾಂಗ್ರೆಸ್‌ ಟೀಕೆ

Date:

  • ‘ಬಿ ಎಲ್‌ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ’
  • ‘ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿದಿದ್ದಾರೆ’

ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ‘ಮತದಾರರ ಚೇತನ ಮಹಾಭಿಯಾನ’ ಸಂಬಂಧಪಟ್ಟಂತೆ ಬಿಜೆಪಿ ಪ್ರಮುಖರ ಜತೆಗೆ ಗುರುವಾರ ಸಭೆ ನಡೆಸಿದ್ದು, ಬಿಜೆಪಿಯ ಪ್ರಮುಖ ನಾಯಕರೇ ಗೈರಾಗಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಟೀಕಿಸಿರುವ ಕಾಂಗ್ರೆಸ್‌, “ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್.ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!” ಎಂದು ವ್ಯಂಗ್ಯವಾಡಿದೆ.

“ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ!” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷರು ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ” ಎಂದು ಕುಟುಕಿದೆ.

“ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ! ಬಿಜೆಪಿಯ ಅಸಮಾದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ ಬಿಜೆಪಿಯೊಳಗಿನ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಹಾಗೆಯೇ ಬಿ ಎಲ್‌ ಸಂತೋಷ್‌ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಳಿಸಿದೆ” ಎಂದು ಟೀಕಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...

ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಚುನಾವಣಾ ಆಯೋಗ ಸಮ್ಮತಿ, ಶೀಘ್ರವೇ ಹಣ ಬಿಡುಗಡೆ; ಸುಪ್ರೀಂಗೆ ಕೇಂದ್ರ ಮಾಹಿತಿ

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ನೀಡಲಾಗಿದೆ. ಕರ್ನಾಟಕಕ್ಕೆ ಮೋಸವಾಗಿಲ್ಲವೆಂದು ಬೊಬ್ಬೆ...

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...