ಹಾವೇರಿ | ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದ ಗ್ರಾ,ಪಂ ಸದಸ್ಯೆ; ಏಳು ವರ್ಷ ಜೈಲು ಶಿಕ್ಷೆ

Date:

ಸುಳ್ಳು ಜಾತಿ ಪ್ರಮಾಣ ನೀಡಿ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದ ಗುತ್ತಲ ಗ್ರಾಮದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹಾವೇರಿ ತಾಲೂಕಿನ ಗುತ್ತಲ ಗ್ರಾಮ ಪಂಚಾಯತಿಗೆ ನಡೆದ ಚುನಾವಣೆ ವೇಳೆ ಹಿಂದೂ ಗೊಂದಳಿ ಸಮುದಾಯದ ಮುಕ್ತಾಬಾಯಿ ಬೀಸೆಗೆ ಎಂಬ ಮಹಿಳೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಕೋಟಾದಲ್ಲಿ ಸ್ಪರ್ಧಿಸಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ, ಮುಕ್ತಾಬಾಯಿ ಅವರಿಗೆ ಏಳು ವರ್ಷ ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 37 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಇನ್ನು ಮುಕ್ತಾಬಾಯಿಗೆ ಸಹಾಯ ಮಾಡಿದ ಆರೋಪದ ಮೇಲೆ ಭರಡಿ ಗ್ರಾಮದ ಮಾರುತಿ ಹನುಮಂತಪ್ಪ ಕಿಳ್ಳಿಕಾತರ್ ಎಂಬುವರಿಗೂ ಏಳು ವರ್ಷ ಜೈಲು ಶಿಕ್ಷೆ ಮತ್ತು 37 ಸಾವಿರ ರೂ. ದಂಡ ವಿಧಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳ್ಳಪ್ಪ ದೊಡ್ಡರಾಮಪ್ಪ ತಳವಾರ ಮತ್ತು ಮಾರುತಿ ಹನುಮಂತಪ್ಪ ಕಿಳ್ಳಿಕ್ಯಾತರ ಸಹಾಯ ಪಡೆದು ಸುಳ್ಳು ವ್ಯಾಸಂಗ ಪ್ರಮಾಣ ಪತ್ರ ದಾಖಲಾತಿ ಸೃಷ್ಟಿಸಿದ್ದರು. ಈ ಸುಳ್ಳು ದಾಖಲಾತಿಗಳ ಮೇಲೆ, ಹಾವೇರಿ ತಹಸೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಅದೇ ಪ್ರಮಾಣ ಪತ್ರದ ಮೇಲೆ 2010ರಲ್ಲಿ ಗುತ್ತಲ ಗ್ರಾಮ ಪಂಚಾಯತ್‌ಗೆ ನಡೆದ ಚುನಾವಣೆಯಲ್ಲಿ ವಾರ್ಡ್ ನಂಬರ್ 10 ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ಸುಳ್ಳು ದಾಖಲಾತಿ ಸಲ್ಲಿಸಿ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿ, ಆಯ್ಕೆ ಆಗಿರುವ ಕುರಿತಂತೆ ಹಾವೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬೆಳಗಾವಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪಿಐ ಎ.ಬಿ.ಹಪ್ಪಳಿ ಪ್ರಕರಣದ ತನಿಖೆ ನಡೆಸಿ, ದೋಷಾರೋಪಣ ಪತ್ರವನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಗಳು ರುಜುವಾತಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿತರಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...