ʼಆಟಿʼಯ ಸಾಂಸ್ಕೃತಿಕ ಅರ್ಥ ಅರಿಯಬೇಕಿದೆ: ಡಾ. ಕಾರಂತ ಟ್ರಸ್ಟ್‌ನ ಅಮೃತಾ ಶೆಟ್ಟಿ

Date:

ʼಆಟಿʼಯೆಂದರೆ ಹತ್ತಾರು ಬಗೆಯ ತಿಂಡಿಗಳನ್ನು ತಯಾರಿಸಿ ಸವಿಯುವುದಷ್ಟೇ ಅಲ್ಲ, ಬದಲಾಗಿ ಆಟಿಯ ನೈಜ ಮಹತ್ವ ಹಾಗೂ ನಿಜವಾದ ಸಾಂಸಕೃತಿಕ ಅರ್ಥ ತಿಳಿಯುವ ಕೆಲಸ ನಡೆಯಬೇಕಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಆತ್ರಾಡಿ ಅಮೃತಾ ಶೆಟ್ಟಿ ಹೇಳಿದರು.

- Advertisement -

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಮಹಿಳಾ ಘಟಕ ಉರ್ವದ ತುಳು ಭವನದಲ್ಲಿ ಆಯೋಜಿಸಿದ್ದ ʼಆಟಿದ ಗೇನʼ ಕಾರ್ಯಕ್ರಮದಲ್ಲಿ ಆಟಿಯ ಕುರಿತು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

“ಆಟಿ ತಿಂಗಳ ಸಮಸ್ಯೆಗಳ ಬಗ್ಗೆ ತಿಳಿಯಬೇಕು, ಈಗ ಆ ರೀತಿಯ ಸಮಸ್ಯೆಗಳಿಲ್ಲ. ಆದರೆ, ಮುಂದಿನ ಪೀಳಿಗೆಗೆ ಅದರ ಅರಿವು ಇರಬೇಕು. ಆಟಿ ಕಷಾಯ ಕುಡಿಯುವ ಕಾರಣ ಮತ್ತು ಪರಿಣಾಮಗಳನ್ನು ತಿಳಿದುಕೊಳ್ಳಬೇಕು. ಆಟಿ ಎಂದರೆ ಅನಿಷ್ಟ ಅಲ್ಲ. ಒಳ್ಳೆಯ, ಸುಖದ ತಿಂಗಳು. ತುಳುವ ಹೆಣ್ಣಿನ ತಾಕತ್ತು ಮತ್ತು ಮನೆ ಸಂಸಾರ ನಿಭಾಯಿಸಯವ ಶಕ್ತಿ ನಿರೂಪಣೆಯ ಹಾಗೂ ಸಾಬೀತುಪಡಿಸುವ ಸಮಯವಾಗಿದೆ. ಮನೆಯವರಿಗೂ ಬಂದವರಿಗೂ ಹೊಟ್ಟೆ ತುಂಬಿಸುವ ಆಕೆಯ ಕಾಳಜಿ ಮತ್ತು ಬದುಕಿನ ಮೌಲ್ಯ ತಿಳಿದುಕೊಳ್ಳಬೇಕು. ಮಳೆಗಾಲದಲ್ಲಿ ತಿನ್ನುವ ಆಹಾರವೆಲ್ಲವೂ ಹಸಿವಿಗೆ ಹೊರತು ನಾಲಗೆ ರುಚಿಗಲ್ಲ. ಆಟಿ ಕಷಾಯ ಹಿಂದಿನವರಿಗೆ ಬದುಕಿನ ಭಾಗವಾಗಿತ್ತು. ಈಗ ಸೋಷಿಯಲ್ ಮೀಡಿಯಾ ಮಿಂಚಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ಆಟಿಯಲ್ಲಿ ಕೇವಲ ಗದ್ದೆಯ ಕೆಸರಿನಲ್ಲಿ ಆಡುವುದಷ್ಟೇ ಸೀಮಿತವಾಗದೆ, ವರ್ಷದಲ್ಲಿ ಒಂದು ಬಾರಿಯಾದರೂ ಭತ್ತ ಬೆಳೆಸುವ ಉಮೇದನ್ನು ಬೆಳೆಸಿಕೊಳ್ಳೋಣ, ಹಡಿಲು ಬಿದ್ದ ಗದ್ದೆಯಲ್ಲಿ ಮತ್ತೆ ಬೆಳೆ ಮಾಡುವುದರತ್ತ ಚಿತ್ತ ಹರಿಸಬೇಕಿದೆ” ಎಂದರು.

ಇದನ್ನೂ ಓದಿ: ಮಂಗಳೂರು | ಕಲ್ಲಚ್ಚು ಪ್ರಶಸ್ತಿ; ಐವರು ಸಾಧಕರು ಆಯ್ಕೆ

ಎಜೆ ಆಸ್ಪತ್ರೆಯ ಫಿಸಿಯಾಲಜಿ ವಿಭಾಗದ ಡಾ.ಕಲ್ಪನಾ ಅಶ್ಫಕ್ ಕಾರ್ಯಕ್ರಮ ಉದ್ಘಾಟಿಸಿದರು. ಮುಂಡಾಲ ಯುವ ವೇದಿಕೆ ಅಧ್ಯಕ್ಷ ಪ್ರದೀಪ್ ಕಾಪಿಕಾಡ್, ಮಲಾರ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ ಎಸ್. ಪೊಳಲಿ, ಗ್ರಾ.ಪಂ.ಪಿಡಿಒ ವಸಂತಿ ಜಯಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಪವಿತ್ರಾ ಕೆ, ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಚೇತನಾ ರೋಹಿತ್ ಉಳ್ಳಾಲ್, ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಕವಿತಾ ಶೈಲೇಶ್, ಶಿಕ್ಷಕಿ ಮಲ್ಲಿಕಾ ರಘುರಾಜ್, ವೀಣಾ ಶ್ರೀನಿವಾಸ್, ಹರೀಶ್ ಕೊಡಿಯಾಲ್ ಬೈಲ್, ಕಿರಣ್, ರಘುರಾಜ್ ಕದ್ರಿ, ರಜನೀಶ್ ಕಾಪಿಕಾಡ್ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...