ಕೊಪ್ಪಳದಲ್ಲಿ ‘ಜಿಂಕೆ ಪಾರ್ಕ್‌’ ನಿರ್ಮಾಣಕ್ಕೆ ರೈತ ಸಂಘ ಆಗ್ರಹ

Date:

  • ಜಿಂಕೆಗಳ ಹಾವಳಿಯಿಂದ ಬೇಸತ್ತು ಹೋಗಿರುವ ರೈತರು
  • ನೂತನ ಸರ್ಕಾರವಾದರೂ ಜಿಂಕೆ ಪಾರ್ಕ್‌ ನಿರ್ಮಿಸಲಿ

ಜಿಂಕೆಗಳ ಹಾವಳಿಯಿಂದ ರೈತರು ಹೈರಾಣಾಗಿದ್ದು, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನೂತನ ಸರ್ಕಾರವಾದರೂ ಕೊಪ್ಪಳದಲ್ಲಿ ಜಿಂಕೆ ಪಾರ್ಕ್‌ (ಉದ್ಯಾನ) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಜಿಂಕೆ ಪಾರ್ಕ್ ನಿರ್ಮಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ 2005 ರಿಂದ ಹೋರಾಟ ನಡೆಯುತ್ತಿದೆ. ಇಷ್ಟು ದೀರ್ಘ ಕಾಲದಿಂದ ಹೋರಾಟ ಮಾಡುತ್ತಾ ಬಂದರೂ ಈ ವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಯಾವೊಬ್ಬ ಮುಖ್ಯಮಂತ್ರಿ ಮತ್ತು ಜನಪ್ರತಿನಿಧಿಗಳು ಜಿಂಕೆ ಪಾರ್ಕ್ ನಿರ್ಮಾಣದ ಬಗ್ಗೆ ಗಮನ ಹರಿಸಿಲ್ಲ.

ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಗದ್ದುಗೆ ಏರುವವರು ಯಾರೆ ಇರಲಿ ಕೊಪ್ಪಳ ಜಿಲ್ಲೆಯಲ್ಲಿ ಒಂದು ಜಿಂಕೆ ಪಾರ್ಕ್ ನಿರ್ಮಾಣ ಮಾಡಿಕೊಡಬೇಕೆಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಕೊಪ್ಪಳ ಜಿಂಕೆ

ಉತ್ತರ ಕರ್ನಾಟಕ ಭಾಗದ ಕೊಪ್ಪಳ, ರಾಯಚೂರು, ಗದಗ, ಬಳ್ಳಾರಿ, ಹಾವೇರಿ ಮತ್ತು ಧಾರವಾಡ, ಬಾಗಲಕೋಟೆ, ಬೀದರ್ ಈ ಎಂಟೂ ಜಿಲ್ಲೆಗಳಲ್ಲಿ ರೈತರು ಜಿಂಕೆ ಹಾವಳಿಗೆ ಬೆಸತ್ತು ಹೋಗಿದ್ದಾರೆ. ಕಳೆದ 18 ವರ್ಷಗಳಿಂದ ಈ ಸಮಸ್ಯೆ ಇದ್ದರೂ ಯಾವ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಜಿಂಕೆ ಪಾರ್ಕ್ ನಿರ್ಮಾಣ ಮಾಡಿಕೊಡಲು ಮುಂದೆ ಬರಲಿಲ್ಲ ಎಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ಆರೋಪಿಸಿದ್ದಾರೆ.

2010ರಲ್ಲಿ ಗದಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೂಲಕ ಜಿಂಕೆ ಪುಸ್ತಕ ಬಿಡುಗಡೆ ಮಾಡಿಸಿದ್ದೇವು. ನಂತರ 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಮತ್ತು ಸಚಿವ ಬಸವರಾಜ ರಾಯರಡ್ಡಿ ಹಾಗೂ ಅರಣ್ಯ ಸಚಿವರಿಗೆ 2016ರ ಜುಲೈ 15ರಿಂದ ಆಗಸ್ಟ್ 15 ರವರಿಗೆ ಒಂದು ತಿಂಗಳ ಕಾಲ ಜಿಂಕೆ ಪಾರ್ಕ್ ಮಾಡಲು ಪತ್ರ ಚಳುವಳಿ ಮಾಡಲಾಗಿತ್ತು. ಅಲ್ಲದೇ ಮೂವರಿಗೂ ಎಸ್ಎಂಎಸ್ ಚಳವಳಿ ಮಾಡಿದೇವು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇದ್ರೀಸ್‌ ಪಾಷ ಸಾವು ಪ್ರಕರಣ | ಪುನೀತ್‌ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

2017ರಲ್ಲಿ “ಜಿಂಕೆ ಕಾಟ – ರೈತರ ಪರದಾಟ” ಎಂಬ 21 ನಿಮಿಷದ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಿ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಗಮನ ಸೇಳೆದರೂ ಯಾವ ಸರ್ಕಾರವು ಜಿಂಕೆ ಪಾರ್ಕ್ ನಿರ್ಮಾಣ ಮಾಡಿ ಕೊಡಲಿಲ್ಲ ಎಂದು ರೈತ ಮುಖಂಡ ಮಹೇಶಪ್ಪ ಹಡಪದ್ ಆಗ್ರಸಿದರು.  

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಗದಗ ಜಿಲ್ಲೆಯ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಬಾಬರಿ, ಯರೇಹಂಚಿನಾಳ ಗ್ರಾಮ ಘಟಕ ಅಧ್ಯಕ್ಷ ಬಸವರಾಜ ಕಮತರ, ರವಿ ಕಮತರ, ಚನ್ನಪ್ಪ ನಾಲವಾಡ, ರವಿ ಹೊಸಮನಿ, ಕಿರಣ ಸೀಳಿನ್,  ರಾಜಪ್ಪ ಮಡಿವಾಳರ, ಫಕ್ಕಿರಪ್ಪ ಸೋಂಪೂರ, ಬಸವಣ್ಣಪ್ಪ ಕುರಿ, ಮಾರುತಿ ನೆರಗಲ್ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...