ಯಾದಗಿರಿ | ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದಾಳಿ ಖಂಡನೀಯ

Date:

  • ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವಜಾ ಮಾಡಲು ಆಗ್ರಹ
  • ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದ್ದ ಘಟನೆ

ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿ ಮಾರಣಾಂತಿಕ ದಾಳಿ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಶಹಾಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಂಚಲದೊರೆ ಹಾಗೂ ಅಂಕಸಂದ್ರ ಗ್ರಾಮ ಪಂಚಾಯಿತಿಯ ಸುಮಾರು 35 ಗ್ರಾಮಗಳ ಸುಮಾರು ಎರಡು ಸಾವಿರಕ್ಕಿಂತಲೂ ಅಧಿಕ ಬಡ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ಸಲ್ಲಿಸಿದ್ದರು. ಅರ್ಜಿಗಳನ್ನು ವಿಲೇವಾರಿ ಮಾಡದೇ, ಅವರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ದೌರ್ಜನ್ಯ ನಡೆಸಿ, ಬೆದರಿಸಿ ಒಕ್ಕಲೆಬ್ಬಿಸಿ ಬೀದಿಗೆ ತಳ್ಳುವ ಹೇಯ ಕುತಂತ್ರವನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತರ ಮೇಲೆ ದೌರ್ಜನ್ಯ ನಡೆಸಿರುವ ಗುಬ್ಬಿ ಎಸಿಎಫ್‌ ಮಹೇಶ್, ರೇಂಜರ್ ದುಗ್ಗಯ್ಯ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕರ್ತವ್ಯದಿಂದ ವಜಾ ಮಾಡಬೇಕು. ಒಕ್ಕಲೆಬ್ಬಿಸುವ ಕುತಂತ್ರಗಳನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ನಡೆಸಿರುವ ಮಾರಣಾಂತಿಕ ದಾಳಿಯಿಂದ ಗುಬ್ಬಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ದೊಡ್ಡ ನಂಜಯ್ಯ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯರು ಸೇರಿದಂತೆ ಹತ್ತಾರು ಮಹಿಳೆಯರು – ಪುರುಷರಿಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ. ಇದು ಅತ್ಯಂತ ಅಮಾನವೀಯ ಎಂದು ಆರೋಪಿಸಿದರು.

ಸರ್ಕಾರವು ಪಾರಂ. 50, 53, 57 ಅಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಅದರಂತೆ ಚೇಳೂರು ಹೋಬಳಿಯ ಈ ಎಲ್ಲ ರೈತರು ಕಳೆದ ಹಲವಾರು ದಶಕಗಳಿಂದ ಸಾಗುವಳಿಯಲ್ಲಿ ತೊಡಗಿದವರು ಅರ್ಜಿಗಳನ್ನು ಸಲ್ಲಿಸಿದ್ದರು. ಈಗ ಈ ಎಲ್ಲ ಅರ್ಜಿಗಳ ವಿಲೇವಾರಿ ಬಾಕಿ ಇರುವಾಗಲೇ ಅರಣ್ಯ ಇಲಾಖೆಯ ಮೂಲಕ ರೈತರ ಬಗರ್ ಹುಕುಂ ಸಾಗುವಳಿಯ ಜಮೀನುಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇದಕ್ಕಾಗಿ ಅರಣ್ಯ ಇಲಾಖೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

ಬೇಡಿಕೆಗಳು:

1. ಗುಬ್ಬಿ ತಾಲೂಕು ಚೇಳೂರು ಹೋಬಳಿ ಬಡ ಸಾಗುವಳಿದಾರರ ಮೇಲೆ ದೊಣ್ಣೆ ಬಳಸಿ ದೌರ್ಜನ್ಯ ನಡೆಸಿರುವ ಎಸಿಎಫ್ ಮಹೇಶ, ರೇಂಜರ್ ದುಗ್ಗಯ್ಯ , ಮಹಮ್ಮದ್ ಮನ್ಸೂರ್ ಮುಂತಾದ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಕೆಲಸದಿಂದ ವಜಾ ಮಾಡಿ ಬಂಧಿಸಿ ಜೈಲಿಗೆ ತಳ್ಳಬೇಕು.

2. ಖಾಸಗಿ ಗೊಂಡಾಗಳನ್ನು ಬಳಸಿ ಅರಣ್ಯ ಇಲಾಖೆ ನಡೆಸಿರುವ ದೌರ್ಜನ್ಯದಲ್ಲಿ ನೊಂದ ಎಲ್ಲ ರೈತರಿಗೆ ಕನಿಷ್ಠ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು.

3. ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಗಳು ಇತ್ಯರ್ಥಕ್ಕೆ ಬಾಕಿ ಇರುವಾಗ ಅರಣ್ಯ ಇಲಾಖೆ ಸೇರಿದಂತೆ ಯಾರೂ ರೈತರ ಸಾಗುವಳಿ ಸ್ವಾಧೀನಕ್ಕೆ ಅಡ್ಡಿ ಮಾಡದಂತೆ ರಕ್ಷಣೆ ನೀಡಬೇಕು.

4. ಸಾಗುವಳಿ ರೈತರ ಅರ್ಜಿಗಳು ಬಾಕಿ ಇರುವಾಗಲೇ ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ತಾಳೆಕೊಪ್ಪ, ದಾಸಪ್ಪನಹಳ್ಳಿ, ಪೇಟೆ ಕುರುಬರಹಳ್ಳಿ, ಕುರುಬರಹಳ್ಳಿ, ಶಿರಿವಲ್ಲೇಹಳ್ಳಿ, ಸೋರೆಕಾಯಿಪೇಟೆ, ಹೊನ್ನೇನಹಳ್ಳಿ, ತೊಗರಿಗುಂಟೆ ಈ ಎಲ್ಲ ಗ್ರಾಮಗಳಲ್ಲಿ ಸರ್ವೆ ನಂಬರ್‌ಗಳ ಎಂಆರ್ ಗಳನ್ನು ರದ್ದುಪಡಿಸಿ ಬಗರ್ ಹುಕುಂ ರೈತರ ಹಕ್ಕುಗಳನ್ನು ರಕ್ಷಿಸಬೇಕು.

5. ಚೇಳೂರು ಹೋಬಳಿ ಮಂಚಲದೊರೆ ಹಾಗೂ ಅಂಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಗರ್ ಹುಕುಂ ಸಾಗುವಳಿದಾರರನ್ನು ಕಾನೂನು ಬಾಹಿರ ವಾಗಿ ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ತಮ್ಮ ಸಿಬ್ಬಂದಿ ಗಳ ಮೂಲಕ ಪರಿಶಿಷ್ಟ ಜಾತಿ, ಪಂಗಡ ಸಮಯದಾಯಗಳ ಜನರ ಮೇಲೆ ನಡೆಸಿರುವ ದೌರ್ಜನ್ಯ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಕೂಡಲೇ ರಾಜ್ಯ ಸರ್ಕಾರ ವಿಚಾರಣಾ ಸಮಿತಿ ರಚಿಸಿ ನೊಂದ ಜನತೆಯ ಅಹವಾಲು ದಾಖಲಿಸಬೇಕು.

6. ಸಾಗುವಳಿ ಸಕ್ರಮ ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಬಾಕಿ ಇರುವಾಗ ಯಾರನ್ನೂ ಒಕ್ಕಲೆಬ್ಬಿಸಬಾರದು. ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಬೇಕು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗೊಂದಿ, ಶಹಾಪುರ ತಾಲೂಕ ಕಾರ್ಯದರ್ಶಿ ಭೀಮರಾಯ ಪೂಜಾರಿ, ಶಹಾಪುರ ತಾಲೂಕ ಅಧ್ಯಕ್ಷರು ಹೊನ್ನಪ್ಪ ಮಾನಪಾಡಿ, ಮುಖಂಡರಾದ ಪವೇಲ ಆನೆಗುಂದಿ, ಮಲ್ಲಿಕಾರ್ಜುನ್ ರಸ್ತಾಪುರ, ಸಾಹೇಬ್ ಪಟೇಲ್, ಮಲ್ಲಿಕಾರ್ಜುನ್ ಕಕಾಪುರ್, ಭೀಮಣ್ಣ ಮ್ಯಾಗೇರಿ ಹಾಗೂ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಿಜೆಪಿಯ ದುರಾಡಳಿತದಿಂದ ಕಾಂಗ್ರೆಸ್‌ಗೆ ಅಧಿಕಾರ: ಚಾಮರಸ ಮಾಲಿ ಪಾಟೀಲ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಕಾರ್ಡ್ ನೀಡಿದ್ದರಿಂದ ರಾಜ್ಯ ವಿಧಾನಸಭೆಯಲ್ಲಿ‌...

ಬೆಳಗಾವಿ | ಮತ್ತೊಂದು ಭೀಕರ ಅಪಘಾತ

ಮೈಸೂರಿನ ಟಿ ನರಸೀಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದರು....

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ...

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗದು: ಉಪಮುಖ್ಯಮಂತ್ರಿ ಡಿಕೆಶಿ

ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು ಸೌಹಾರ್ದತೆಯಿಂದ ಮೇಕೆದಾಟು ಯೋಜನೆಗೆ ಸಹಕರಿಸಿ ಮೇಕೆದಾಟು...