ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

Date:

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಮಧ್ಯಾಹ್ನದ ವೇಳೆ ಅಂತಿಮ ಸಂಸ್ಕಾರ ನಡೆಸಲಾಯಿತು.

ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ತಿಯಾಝ್ ಎಂಬವರನ್ನು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆಯ ಸಮೀಪ ಪತ್ತೆಯಾಗಿದ್ದವು.

ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹಗಳನ್ನು ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸೀದಿಗೆ ಹಾಗೂ ಸಿದ್ದೀಕ್ ಅವರ ಮೃತದೇಹವನ್ನು ಶಿರ್ಲಾಲು ಮಸೀದಿಗೆ ತಂದು ಅಲ್ಲಿ ಅಂತಿಮ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...