ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಲಿ: ಜಮಾಅತೆ ಇಸ್ಲಾಮೀ ಹಿಂದ್ ಆಗ್ರಹ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ಅಬ್ದುಲ್ ರಹ್ಮಾನ್ ಎಂಬ ಯುವಕನ ಹತ್ಯೆಯನ್ನು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ತೀವ್ರವಾಗಿ ಖಂಡಿಸಿದೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಲ್ಗಾಮಿ, “ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯದ ಜನತೆಯು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡುವಂತೆ ನಾವು ವಿನಂತಿಸುತ್ತೇವೆ. ಕರಾವಳಿ ಪ್ರದೇಶದಲ್ಲಿ ದ್ವೇಷ ಭಾಷಣ, ಪ್ರತೀಕಾರದ ಕೊಲೆಗಳು, ಮತ್ತು ಪ್ರಚೋದನಕಾರಿ ರಾಜಕಾರಣವು ಸಾಮಾನ್ಯವಾಗಿದ್ದು, ಇವುಗಳನ್ನು ವ್ಯವಸ್ಥಿತವಾಗಿ ಪೋಷಿಸಲಾಗುತ್ತಿದೆ. ಕೊಲೆಗಾರನಿಗೆ ತಾನು ಯಾಕೆ ಕೊಲೆ ಮಾಡುತ್ತಿದ್ದೇನೆ ಮತ್ತು ಕೊಲೆಯಾಗುವವನಿಗೆ ತಾನು ಯಾಕೆ ಕೊಲೆಯಾಗುತ್ತಿದ್ದೇನೆ ಎಂಬುದೇ ತಿಳಿಯದ ತಲೆಮಾರು ಇಲ್ಲಿ ಸೃಷ್ಟಿಯಾಗುತ್ತಿರುವುದು ದುರಂತವಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಬೇಕು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಣಕ್ಕಾಗಿ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ರಚನೆಯ ಸರ್ಕಾರದ ನಿರ್ಧಾರಕ್ಕೆ ಅಬ್ದುಲ್‌ ರಹ್ಮಾನ್ ಕೊಲೆ ದೊಡ್ಡ ಸವಾಲು ಎಸೆದಿದೆ. ಯುವಕರನ್ನು ತಪ್ಪುದಾರಿಗೆ ತಳ್ಳುವ ದ್ವೇಷ ಭಾಷಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಈ ಅಮಾನವೀಯ ಕೃತ್ಯವನ್ನು ನಡೆಸಿದ ಅಪರಾಧಿಗಳನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...