- ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತ
- ಸಮೀಕ್ಷೆಗಳು ಎಲ್ಲ ಕಾಲಕ್ಕೂ ನಿಜವಾಗುವುದಿಲ್ಲ
ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡುತ್ತದೆ. ಒಂದು ವೇಳೆ ಹೈಕಮಾಂಡ್ ನನ್ನನ್ನು ಮುಖ್ಯಮಂತ್ರಿ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ..? ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ. 2013ರಲ್ಲಿ 120 ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ, ನಾವು 122 ಸ್ಥಾನ ಗೆದ್ದವು. ಈಗ ನಾನು 130 ಸ್ಥಾನ ಗೆಲ್ಲುತ್ತೇವೆ ಎಂದಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಎಲ್ಲ ಕಾಲಕ್ಕೂ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರೋದು ಗೊತ್ತಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
“ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ತೊಂದರೆ ಇಲ್ಲದೇ ಸಿದ್ಧರಾಮಯ್ಯ ಗೆಲ್ತಾರೆ. ಕೊರಟಗೆರೆ ಕ್ಷೇತ್ರದಲ್ಲಿ ನಾನು ಹೆಚ್ಚು ಮತಪಡೆದು ಗೆಲ್ಲುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಎದುರಾಗಿ ಆಪರೇಷನ್ ಹಸ್ತ?
“ತುಮಕೂರಿನಲ್ಲಿ ಕಾಂಗ್ರೆಸ್ 6 ರಿಂದ 7 ಸ್ಥಾನವನ್ನು ಗೆಲ್ಲುತ್ತದೆ. ಮುಖ್ಯ ಮಂತ್ರಿ ಆಯ್ಕೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸಿಎಲ್‌ಪಿ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಸಿಎಂ ಬಗ್ಗೆ ತೀರ್ಮಾನ ಮಾಡುತ್ತೇವೆ. ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಾರೆ” ಎಂದು ಹೇಳಿದ್ದಾರೆ.