ಬೀದರ್‌ | ಮಳೆಗೆ ಮನೆ ಕುಸಿತ; 94 ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ

Date:

ಭಾಲ್ಕಿ ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮನೆ ಕುಸಿತ ಕಂಡ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಹಾರ ಧನ ತಿಳುವಳಿಕೆ ಪತ್ರ ವಿತರಿಸಿದರು.

ಪಟ್ಟಣದ ತಹಸೀಲ್ ಕಚೇರಿಯಲ್ಲಿ 94 ಸಂತ್ರಸ್ತರಿಗೆ ಸಚಿವರು ತಿಳುವಳಿಕೆ ಪತ್ರ ವಿತರಿಸಿ ಮಾತನಾಡಿದ ಅವರು, “ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮಳೆ ಸುರಿದು ಹಲವು ಮನೆಗಳು ಕುಸಿತ ಕಂಡು ಜನರು ಸಂಕಷ್ಟ
ಅನುಭವಿಸಿದರು. ಅಧಿಕಾರಿಗಳಿಗೆ ಸೂಚಿಸಿ ಸಮೀಕ್ಷೆ ನಡೆಸಿ ಸರಕಾರದಿಂದ 94 ಫಲಾನುಭವಿಗಳಿಗೆ ಪರಿಹಾರ ಧನ ಮಂಜೂರು ಮಾಡಿಸಿದ್ದೇನೆ. ಒರ್ವ ಫಲಾನುಭವಿಯ ಮನೆ ಸಂಪೂರ್ಣ ಕುಸಿತ ಕಂಡಿದ್ದು ಅವರಿಗೆ 1.20 ಲಕ್ಷ ರೂ
ಮತ್ತು ಉಳಿದ 63 ಫಲಾನುಭವಿಗಳಿಗೆ ತಲಾ 50 ಸಾವಿರ ರೂ ಪರಿಹಾರ ಧನ ಮಂಜೂರು ಮಾಡಿಸಿದ್ದೇನೆ” ಎಂದರು.

“ಈ ಹಿಂದೆ ಸರಕಾರದಿಂದ ಪರಿಹಾರ ಧನ ಕೇವಲ 5 ಸಾವಿರ ರೂ ಮಾತ್ರ ನೀಡಲಾಗುತ್ತಿತ್ತು. ಆದರೆ ಸಚಿವ ಸಂಪುಟದಲ್ಲಿ ಚರ್ಚಿಸಿ ಹೆಚ್ಚುವರಿ ಪರಿಹಾರ ಮಂಜೂರು ಮಾಡಿಸಿದ್ದೇನೆ. ಒಂದೆರಡು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಅದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಈ ಸಂದರ್ಭದಲ್ಲಿ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ, ಉಪ-ತಹಸೀಲ್ದಾರ್ ಗೋಪಾಲ ಹಿಪ್ಪರಗಿ, ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...