ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪದ ಪತ್ರ | ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕೈವಾಡ ಬಯಲು

Date:

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪದ ಪತ್ರಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡ ಇದೆ ಎಂಬ ಮಾಹಿತಿ ಬಯಲಾಗಿದೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪತ್ರ ಪ್ರಕರಣ ರಾಜ್ಯ ಸರ್ಕಾರದ ವಿರುದ್ಧ ಟೀಕಿಸಲು ಪ್ರತಿಪಕ್ಷಗಳಿಗೆ ಅಸ್ತ್ರವಾಗಿತ್ತು. ಪ್ರತಿಪಕ್ಷಗಳಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ತನಿಖೆಯನ್ನು ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳು ಕೆ.ಆರ್‌.ಪೇಟೆಯ ಕೃಷಿ ಇಲಾಖೆಯ ಅಧಿಕಾರಿಗಳಾದ ಶಿವಪ್ರಸಾದ್ ಮತ್ತು ಗುರುಪ್ರಸಾದ್ ಇಬ್ಬರು ಅಧಿಕಾರಿಗಳನ್ನು ವಶಪಡಿಸಿಕೊಂಡು ವಿಚಾರಣೆಗೆ ಒಳಪಡಿಸಿದಾಗ, ಬಂಧಿತ ಗುರುಪ್ರಸಾದ್​ ವಿಚಾರಣೆ ವೇಳೆ ಮಹತ್ವದ ಅಂಶಗಳನ್ನು ಬಾಯಿಬಿಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಡೀ ಪತ್ರ ಪ್ರಕರಣದ ಹಿಂದೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡ ಇದೆ ಎಂದು ಬಂಧಿತ ಅಧಿಕಾರಿಗಳು ಬಾಯಿಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನು ಸಿಐಡಿ ಅಧಿಕಾರಿಗಳು ಕರೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಸಿಐಡಿ ವಿಚಾರಣೆ ವೇಳೆ ಜಂಟಿ ನಿರ್ದೇಶಕರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಮುಂದುವರಿದು, ಜಂಟಿ ನಿರ್ದೇಶಕ ಕೈವಾಡದ ಕುರಿತು ಮಹತ್ವದ ಸಾಕ್ಷ್ಯಾಧಾರ ಸಿಐಡಿಗೆ ಲಭ್ಯವಾಗಿದೆ. ಸಾಕ್ಷ್ಯದ ಸತ್ಯಾಸತ್ಯತೆ ಪರಿಶೀಲನೆಗೆ ಸಿಐಡಿ ಪೊಲೀಸರು ಎಫ್​ಎಸ್​ಎಲ್​ಗೆ ರವಾನೆ ಮಾಡಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...