ಅಧಿವೇಶನ | ಕಲಾಪ ನುಂಗಿಹಾಕಿದ ಐಎಎಸ್‌ ಅಧಿಕಾರಿಗಳ ನಿಯೋಜನೆ ವಿಚಾರ: ಸಿಎಂ ತರಾಟೆ

Date:

  • ಪ್ರತಿಪಕ್ಷಗಳ ನಾಯಕರ ಗಲಾಟೆಗೆ ನಾವು ಸೊಪ್ಪು ಹಾಕಲ್ಲ: ಸಿಎಂ ಸಿದ್ದರಾಮಯ್ಯ
  • ರಾಜಕೀಯ ಲಾಭಕ್ಕಾಗಿ ಪುಡಿ ಪಾರ್ಟಿಗಳಿಗೆ ರಾಜ ಮರ್ಯಾದೆ ಕೊಟ್ಟಿದೆ: ಬೊಮ್ಮಾಯಿ

ವಿರೋಧ ಪಕ್ಷಗಳ ಸಭೆಗೆ ಆಗಮಿಸಿದ್ದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮತ್ತು ಗಣ್ಯರಿಗೆ ರಾಜ್ಯ ಸರ್ಕಾರ ಐಎಎಸ್‌ ಅಧಿಕಾರಿಗಳ ನಿಯೋಜನೆ ಮಾಡಿರುವ ವಿಚಾರ ಬುಧವಾರದ ಬೆಳಗಿನ ಸಮಯದ ಸದನವನ್ನು ನುಂಗಿಹಾಕಿತು.

- Advertisement -

ವಿರೋಧ ಪಕ್ಷಗಳ ಸಭೆಗೆ ಆಗಮಿಸಿದ ವಿವಿಧ ಪಕ್ಷಗಳ ನಾಯಕರಿಗೆ ಐಎಎಸ್‌ ಅಧಿಕಾರಿಗಳನ್ನು ನೇಮಿಸಿದ್ದು ತಪ್ಪು ಎಂದು ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಗಲಾಟೆ ಆರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಹೆಚ್ಚಾಗಿ, ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಸಭಾಧ್ಯಕ್ಷರು ಸದನವನ್ನು ಕೆಲ ಕಾಲ ಮುಂದೂಡಿದರು. ಮತ್ತೆ ನಂತರ ಸದನ ಆರಂಭವಾದರೂ ಬಿಜೆಪಿ ಸದಸ್ಯರು ಪ್ರತಿಭಟನೆಯನ್ನು ಹಿಂಪಡೆಯಲಿಲ್ಲ.

ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, “ರಾಜಕೀಯ ರೊಟ್ಟಿ ಸುಟ್ಟುಕೊಳ್ಳಲು ರಾಜ್ಯದ ಮರ್ಯಾದೆಯನ್ನು ಕಾಂಗ್ರೆಸ್‌ ಸರ್ಕಾರ ತೆಗೆದಿದೆ. ರಾಜಕೀಯ ಲಾಭಕ್ಕಾಗಿ ಪುಡಿ ಪಾರ್ಟಿಗಳಿಗೆ ರಾಜ ಮರ್ಯಾದೆ ಕೊಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

“ಯಾವ್ಯಾವ ಐಎಎಸ್‌ ಅಧಿಕಾರಿಗಳು ವಿರೋಧ ಪಕ್ಷಗಳ ಸಭೆಗೆ ಹಾಜರಾಗಿದ್ದಾರೆ ಅವರಿಗೆಲ್ಲ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಬೇಕು. ಅವರ ಸಂಬಳ ತಡೆಹಿಡಿಯಬೇಕು. ಐಎಎಸ್‌ ಅಧಿಕಾರಿಗಳು ತಮ್ಮ ಕರ್ತವ್ಯ ಮರೆತು ಈ ಸರ್ಕಾರದಲ್ಲಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರಿನಲ್ಲಿ ಹುಟ್ಟಿರುವ ‘ಇಂಡಿಯಾ’ದ ದಾರಿ ಸಲೀಸಲ್ಲ

ಆರ್‌ ಅಶೋಕ್ ಮಾತನಾಡಿ, “ಐಎಎಸ್‌ ಅಧಿಕಾರಿಗಳನ್ನು ಕಾಂಗ್ರೆಸ್‌ ಅಡುಗೆಮನೆ ಕೆಲಸಕ್ಕೂ ಬಳಸಿಕೊಳ್ಳುತ್ತದೆ. ಈ ಸರ್ಕಾರವನ್ನು ಕೂಡಲೇ ವಜಾಮಾಡಬೇಕು” ಎಂದು ಸಭಾಧ್ಯಕ್ಷರನ್ನು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ, “ಮೊದಲಿನಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ. ಪ್ರತಿಪಕ್ಷಗಳ ನಾಯಕರ ಬೆದರಿಕೆಗೆ ನಾವು ಹೆದರಲ್ಲ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಐಎಎಸ್‌ ಅಧಿಕಾರಿಗಳನ್ನು ಹೀಗೆ ನೇಮಿಸಲಾಗಿತ್ತು. ನಾವು ಪ್ರಶ್ನೆ ಮಾಡಿದ್ವಾ? ನಮ್ಮ ರಾಜ್ಯದ ಪರಂಪರೆ ಉಳಿಸಿಕೊಳ್ಳಲು ನಾವು ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ” ಎಂದರು.

“ಪ್ರತಿಪಕ್ಷದ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಕೇವಲ ರಾಜಕೀಯಕ್ಕಾಗಿ ಇದನ್ನೆಲ್ಲ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಕುಮಾರ ಕೃಪಾಕ್ಕೆ ಪೊಲೀಸರನ್ನೇ ಹಾಕಿಕೊಂಡಿದ್ದರು. ಇವರು ಬೇಕು ಅಂತ ಮಾಡುತ್ತಿದ್ದಾರೆ. ಬಜೆಟ್‌ ಮೇಲೆ ಮಾತನಾಡಲು ಇವರಿಗೆ ಶಕ್ತಿ ಇಲ್ಲ. ಇವರ ಗಲಾಟೆಗೆ ನಾವು ಸೊಪ್ಪು ಹಾಕಲ್ಲ” ಎಂದು ಉತ್ತರಿಸಿದರು.

ಸಭಾಧ್ಯಕ್ಷರು ಎಷ್ಟೇ ವಿನಂತಿಸಿಕೊಂಡರು ಪ್ರತಿಪಕ್ಷಗಳ ನಾಯಕರು ಸದನದ ಬಾವಿ ಬಿಟ್ಟು ಕದಲಲಿಲ್ಲ. ಗಲಾಟೆ ನಡುವೆಯೇ ಸದನವನ್ನು ಸಭಾಧ್ಯಕ್ಷರು ಮುಂದುವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...