ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

Date:

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಒಳನಾಡಿನಲ್ಲಿ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಬೆಂಗಳೂರಿನಲ್ಲಿ  ಸಂಜೆ ಅಥವಾ ರಾತ್ರಿಯ ವೇಳೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ ಎಂದು ಇಲಾಖೆ ತಿಳಿಸಿದೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ; 39% ಕಾಮಗಾರಿ ಪೂರ್ಣ

ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಚಿತ್ರದುರ್ಗದ ಬಿ. ದುರ್ಗದಲ್ಲಿ ಗರಿಷ್ಠ (7 ಸೆಂ.ಮೀ.) ಮಳೆಯಾಗಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ (39.8 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ...

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ...

ಕಲಬುರಗಿ | ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತದಾರರಲ್ಲಿ ಸಿಎಂ ಮನವಿ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ...